ಚಿರು ಜೊತೆಗೆ ಡ್ಯಾನ್ಸ್ – ಹಳೆ ವಿಡಿಯೋ ಹರಿಬಿಟ್ಟು ಸಂಸದೆ ಸುಮಲತಾ ತೇಜೋವಧೆ

ಮಂಡ್ಯ ಲೋಕಸಭೆ ಕ್ಷೇತ್ರದ ಸದಸ್ಯೆ ಸುಮಲತಾ ಅಂಬರೀಶ್ ಅವರು ನಟ ಚಿರಂಜೀವಿ ಜೊತೆಗೆ ಡಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ರಾಜ್ಯದ ಜನ ಭಾರಿ ಮಳೆ ಮತ್ತು ಪ್ರವಾಹದಿಂದ ಸಂಕಷ್ಟದಲ್ಲಿರುವಾಗ ಚಿರಂಜೀವಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸುಮಲತಾ ಡಾನ್ಸ್ ಮಾಡಿದ್ದಾರೆ ಎಂದು ಟೀಕಿಸಲಾಗಿದೆ. ಆದರೆ, ಇದು ಹಳೆಯ ವಿಡಿಯೋ ಆಗಿದೆ ಎಂದು ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.

4 ವರ್ಷಗಳ ಹಿಂದಿನ ಹಳೆಯ ವಿಡಿಯೋವನ್ನು ನಕಲಿ ಅಕೌಂಟ್ ಗಳಲ್ಲಿ ಕಿಡಿಗೇಡಿಗಳು ಹರಿಬಿಟ್ಟು ತೇಜೋವಧೆಗೆ ಯತ್ನಿಸಿದ್ದಾರೆ ಎಂದು ದೂರಿದ್ದಾರೆ. ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದವರ ವಿರುದ್ಧವೂ ಕ್ರಮಕೈಗೊಳ್ಳಲು ಅವರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ನೇಹಿತರೇ ನನ್ನ ಹೆಸರಿನಲ್ಲಿ ಹಲವಾರು ನಕಲಿ ಫೇಸ್ ಬುಕ್ ಪೇಜ್ ಗಳನ್ನು ರಚಿಸಲಾಗಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಸೈಬರ್ ಅಪರಾಧ ಶಾಖೆ ಸಹಾಯದಿಂದ ಈ ಕಿಡಿಗೇಡಿ ಕೃತ್ಯವೆಸಗಿದವರ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಯಾರಾದರೂ ಅನಧಿಕೃತ ಪೇಜ್ ಗಮನಿಸಿದರೆ ಅದನ್ನು ಗಮನಕ್ಕೆ ತರುವಂತೆ ಮನವಿ ಮಾಡಿದ್ದಾರೆ. ತಮ್ಮ ಅಧಿಕೃತ ಖಾತೆಗಳ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

https://www.facebook.com/SumalathaAmbi/

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights