ಜನರ ಮೆಚ್ಚುಗೆಗೆ ಪಾತ್ರವಾದ ದಕ್ಷಿಣ ಕನ್ನಡ ಡಿಸಿ ದಿಢೀರ್ ರಾಜೀನಾಮೆ….!

ಆಗಸ್ಟ್ 3ರಿಂದ ರಜೆಯಲ್ಲಿ ತೆರಳಿರುವ ದಕ್ಷಿಣ ಕನ್ನಡ ಡಿಸಿ ಸಸಿಕಾಂತ್ ಸೆಂಥಿಲ್ಅವರು ಐಎಎಸ್ ಸೇವೆಗೆ ದಿಢೀರ್ ರಾಜಿನಾಮೆ ನೀಡಿ ವೈಯಕ್ತಿಕ ಕಾರಣಗಳಿಂದ ರಾಜಿನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಉತ್ತಮ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಡಿಸಿ ಸಸಿಕಾಂತ್ ಸೆಂಥಿಲ್ ಅವರ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವುದು ನೈತಿಕವೆಂದು ನನಗೆ ಅನಿಸುತ್ತಿಲ್ಲ. ಸಂವಿಧಾನದ ಮೂಲ ಆಶಯಗಳು ಕಾಣೆಯಾಗುತ್ತಿದೆ. ಭವಿಷ್ಯದಲ್ಲಿ ಮತ್ತಷ್ಟು ಅಡೆತಡೆ ಬರುವ ಸಾಧ್ಯತೆಯಿದೆ. ಜೊತೆಗೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಸಿಕಾಂತ್ ತಿಳಿಸಿದ್ದಾರೆ.

2009ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2017ರ ಅಕ್ಟೋಬರ್ 10ರಿಂದ ದ‌.ಕ ಜಿಲ್ಲಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ದಕ್ಷ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಮ್ಮ ರಾಜೀನಾಮೆ ವೈಯಕ್ತಿಕ ನಿರ್ಧಾರ ಎಂದು ತಿಳಿಸಿದ್ದರೂ, ತಮ್ಮ ಕ್ಷೇತ್ರದಲ್ಲಿ ಕೆಲಸ ಮಾಡುವ ಸವಾಲುಗಳ ಬಗ್ಗೆಯೂ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಗೋಡೆಗಳು ಕುಸಿಯುತ್ತಿದೆ. ಈ ಸಂಧರ್ಬದಲ್ಲಿ ಸಿದ್ಧಾಂತಕ್ಕೆ ಎದುರಾಗಿ ಹೋಗುವುದು ಕಷ್ಟ. ಸಿದ್ಧಾಂತಕ್ಕೆ ಎದುರಾಗಿ ಕೆಲಸ ಮಾಡುವುದು ನನಗೆ ಕಷ್ಟವಾಗಿದೆ. ಮುಂದಿನ ದಿನಗಳಲ್ಲಿ ದೇಶಕ್ಕೆ ಬಹಳಷ್ಟು ಸವಾಲುಗಳು ಎದುರಾಗಲಿದೆ. ಹೀಗಾಗಿ ನಾನು ಐಎಎಸ್​ನಿಂದ ಹೊರಗಿರಲು ಬಯಸಿದ್ದೇನೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಬೆಂಗಳೂರು ದಕ್ಷಿಣ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿ IPS ಅಣ್ಣಾಮಲೈ ಅವರು ರಾಜೀನಾಮೆ ನೀಡದ್ದನ್ನೂ ಇಲ್ಲಿ ಸ್ಮರಿಸಿಕೊಳ್ಳಬಹುದು. ಹಾಗೆಯೇ ಕೇರಳ ಪ್ರವಾಹದ ಸಂದರ್ಭದಲ್ಲಿ ತಮ್ಮ ಕೆಲಸಗಳಿಂದಲೇ ಜನರ ಮೆಚ್ಚುಗೆ ಪಡೆದಿದ್ದ IAS ಕಣ್ಣನ್ ಗೋಪಿನಾಥನ್ ಅವರೂ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights