ಜನ ಹಿತಕ್ಕಾಗಿ ಡ್ರೋಣ್ ಮೂಲಕ ಔಷಧಿ ಸಿಂಪಡಿಸಿದ ಬಿಬಿಎಂಪಿ ಕಾರ್ಪೋರೇಟರ್…
ಕೊರೊನಾ ವೈರಸ್ ಹರಡದಂತೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ಡ್ರೋಣ ಮೂಲಕ ಔಷಧಿ ಸಿಂಪಡಿಸಲಾಗಿದೆ.
ಹೌದು… ಮಾರುತಿನಗರ, ರವಿ ಬಡವಾಣೆ, ಪರಿಮಳ ನಗರ ಸೇರಿದಂತೆ ಹಲವು ಬಡವಾಣೆಗಳಲ್ಲಿ ಬಿಬಿಎಂಪಿ ಕಾರ್ಪೋರೇಟರ್ ಕೆ.ವಿ.ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಔಷಧಿ ಸಿಂಪಡಣೆ ಆರಂಭವಾಗಿದೆ. ಈ ಹಿನ್ನೆಲೆ ಮನೆಯಿಂದ ಯಾರು ಹೊರ ಬರದಂತೆ ಸೂಚನೆ ಕೂಡ ನೀಡಲಾಗಿದೆ.
ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಷ್ಟೇ ಅಲ್ಲದೆ ಹೋಮ್ ಕ್ವಾರೆಂಟೈನ್‍ನಲ್ಲಿರುವ ಕೊರೊನಾ ಶಂಕಿತರು ಹಾಗೂ ವಿದೇಶದಿಂದ ವಾಪಸ್ ಆದವರು ಹೆಚ್ಚನ ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಔಷಧಿ ಸಿಂಪಡಣೆ ಆರಂಭಿಸಿದೆ.
ಈವರೆಗೂ 19 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಮೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಮೃತಪಟ್ಟಿದ್ದಾರೆ. ದೇಶದಲ್ಲಿ ಶುಕ್ರವಾರ ಒಂದೇ ದಿನ ಅತಿ ಹೆಚ್ಚು 125 ಕೊರೊನಾ ಪಾಸಿಟಿವ್ ದಾಖಲಾಗಿದ್ದು, ಒಟ್ಟು ಪೀಡಿತರ ಸಂಖ್ಯೆ 834ಕ್ಕೆ ಏರಿಕೆಯಾಗಿದೆ.

