ಜೂನ್‌ 18ಕ್ಕೆ ಪಿಯುಸಿ, ಜೂನ್‌ 25ರಿಂದ SSLC ಪರೀಕ್ಷೆಗಳು ಆರಂಭ!

ಪ್ರಸಕ್ತ ಸಾಲಿನಲ್ಲಿ ಜೂನ್ 25 ರಿಂದ ಜುಲೈ 4ರವರೆಗೆ ಎಸ್ಎಸ್ಎಲ್.ಸಿ. ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ 18ರಂದು ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸರ್ಕಾರವೇ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಿದೆ, ಶಾರೀರಿಕ ಅಂತರವನ್ನು ಕಾಯ್ದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಥರ್ಮಲ್ ತಪಾಸಣೆ ಮಾಡಿ ಸ್ಯಾನಿಟೈಜರ್ ಹಾಕಿ ಪರೀಕ್ಷಾ ಕೇಂದ್ರಗಳಿಗೆ ಬಿಡಲಾಗುವುದು. ರಾಜ್ಯದಲ್ಲಿ 2,879 ಪರೀಕ್ಷಾ ಕೇಂದ್ರಗಳಿದ್ದು 43,720 ಕೊಠಡಿಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಮೊರಾರ್ಜಿ ದೇಸಾಯಿ ಶಾಲೆಗಳು, ಸಮಾಜ ಕಲ್ಯಾಣ ಇಲಾಖೆ ನಡೆಸುವ ಹಾಸ್ಟೆಲ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿ ನಿಲಯಗಳನ್ನು ಕ್ವಾರಂಟೈನ್ ಕೇಂದ್ರಗಳಿಗೆ ಬಳಸಿಕೊಂಡಿಲ್ಲ. ಹಾಗಾಗಿ ಅವುಗಳನ್ನು ಎಸ್ಎಸ್ಎಲ್.ಸಿ ಪರೀಕ್ಷೆ ಕೇಂದ್ರಗಳಾಗಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 8,48,196 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಗೆ ತೆಗೆದುಕೊಳ್ಳಲಿದ್ದಾರೆ. ಇದರಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳು ಸೇರಿದ್ದಾರೆ. ವಿದ್ಯಾರ್ಥಿಗಳು ತಾವು ವಾಸವಿರುವ ಸ್ಥಳಕ್ಕೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಒಟ್ಟು ಹತ್ತು ದಿನದ ಅವಧಿಯಲ್ಲಿ ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನದ ವಿಷಯಗಳಿಗೆ ಒಂದೊಂದು ದಿನದ ಅಂತರವಿರಲಿದೆ. ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪುನರ್ ಮನನ ತರಗತಿಗಳನ್ನು ನಡೆಸಲಾಗಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ತಿಳಿಸಿದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights