ಜೂ.16 ರಿಂದ 30ರವರೆಗೆ ರಜೆ ಘೋಷಿಸಿದ ಮೈಸೂರು ವಿಶ್ವವಿದ್ಯಾನಿಲಯ

ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರಗಳು ಮತ್ತು ವಿವಿಯ ಎಲ್ಲಾ ಘಟಕ ಮತ್ತು ಸಂಯೋಜಿತ ಕಾಲೇಜುಗಳಿಗೆ ಜೂ.16ರಿಂದ 30ರವರೆಗೆ ರಜೆ ಘೋಷಿಸಲಾಗಿದೆ ಎಂದು ವಿವಿಯ ಕುಲಸಚಿವ ಪ್ರೊ.ಆರ್‌.ಶಿವಪ್ಪ ತಿಳಿಸಿದ್ದಾರೆ.

ವಿಶ್ವ ವಿದ್ಯಾನಿಲಯ ಧನ ಸಹಾಯ ಆಯೋಗ ಮತ್ತು ಕೇಂದ್ರ ಸರಕಾರದ ಗೃಹ ಸಚಿವಾಲಯವು ಜೂನ್‌ ಕೊನೆ ವಾರದಲ್ಲಿ ವಿಶ್ವವಿದ್ಯಾನಿಲಯಗಳ ಹೊಸ ಮಾರ್ಗಸೂಚಿ ಮತ್ತು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಅಲ್ಲಿವರೆಗೂ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪರೀಕ್ಷೆಗಳನ್ನು ನಡೆಸುವುದು, ಮೌಲ್ಯಮಾಪನ ಮಾಡುವುದು ಸೇರಿದಂತೆ ಶಿಕ್ಷಣ ಸಂಸ್ಥೆಗಳ ಪುನಾರಂಭಿಸುವ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗುತ್ತಿದ್ದು, ಆಸಕ್ತರು ಜೂ.25ರೊಳಗೆ ತಮ್ಮ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಕುಲಸಚಿವರ ಕಚೇರಿಗೆ ಸಲ್ಲಿಸಬಹುದು ಎಂದು ಕೇಳಲಾಗಿದೆ.

ವಿವಿಯ ಎಲ್ಲಾಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರಗಳು, ವಿವಿಯ ಎಲ್ಲಾ ಘಟಕ ಕಾಲೇಜುಗಳಲ್ಲಿನ ಕಾಯಂ ಅಧ್ಯಾಪಕರು ಆಯಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ಬಾಕಿ ಉಳಿದ ಪಠ್ಯಕ್ರಮವನ್ನು ಜೂ. 15ರೊಳಗೆ ಆನ್‌ಲೈನ್‌ ಮೂಲಕ ಪೂರ್ಣಗೊಳಿಸಬೇಕು.  ಹಾಗೂ ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರ ಹೆಸರು ಮತ್ತು ಬೋಧನಾ ಕಾರ್ಯದ ವಿವರವನ್ನು ಸಿದ್ದಪಡಿಸಲಾಗುವುದು ಎಂದು ಸೂಚನೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights