ಡಿಕೆಶಿ ಬಂಧನ – ರಾಜ್ಯದ ಹಲವಡೆ ಹೆಚ್ಚಾದ ‘ಕೈ’ ಕಿಚ್ಚು : ಬಸ್, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಹಲವಡೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ಬಂಧನ ಖಂಡಿಸಿ ರಾಮನಗರ, ಕನಕಪುರದಲ್ಲಿ ಪ್ರತಿಭಟನೆ ಕಾವು ಜೋರಾಗಿದ್ದು, ರಾಮನಗರದ ತೋಟಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ರಸ್ತೆಗೆ ತಂದು ಗ್ರಾಮಸ್ಥರಿಂದ ಪ್ರತಿಭಟನೆ ನಡೆಸಿದ್ದಾರೆ. ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರಿನಲ್ಲಿ ಸುರತ್ಕಲ್ ಮೂಡಿಬಿದರಿ ಸೇರಿದಂತೆ ಹಲವು ಕಡೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿ ಪರಾರಿಯಾಗಿದ್ದಾರೆ. ಮಂಡ್ಯ, ಕೋಲಾರದಲ್ಲೂ ಪ್ರತಿಭಟನೆ ಬೀಸಿ ತಾಗಿದ್ದು,ಸ್ವಗ್ರಾಮ ದೊಡ್ಡಲಾಹಳ್ಳಿಯಲ್ಲಿ ಸಂಪೂರ್ಣ ಬಂದ್ ಮಾಡಲಾಗಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದೆ. ಇನ್ನು ಬೆಂಗಳೂರಿನಲ್ಲೂ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಡಿಕೆಶಿ ಬಂಧನದಿಂದ ಇಂದು ರಾಜ್ಯದೆಲ್ಲೆಡೆ ಭಾರೀ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದೆ. ರಾಜ್ಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಡಿಜಿಪಿ ನೀಲಮಣಿ ರಾಜು, ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಗೆ ಸೂಚನೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights