ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ರಾಜಕೀಯ ಬಣ್ಣ : ಕೈ ಕಮಲದ ನಡುವೆ ಕೆಸರೆರೆಚಾಟ….

ರಾಜಧಾನಿಯ ನೆಮ್ಮದಿ ಕೆಡಿಸಿದ ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಈಗ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ. ಆಡಳಿತ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ನಡುವೆ ಈ ವಿಚಾರವಾಗಿ ರಾಜಕೀಯ ಮೇಲಾಟ ಶುರುವಾಗಿದೆ.

ಇಡೀ ಘಟನೆಗೆ ಪೊಲಿಸರ ವೈಫಲ್ಯ ಕಾರಣ ಮತ್ತು ಅವಹೇಳನಕಾರಿ ಪೋಸ್ಟ್ ಮಾಡಿದಾತ ಬಿಜೆಪಿ ಬೆಂಬಲಿಗ ಎಂಬ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು ಇದು ಓಲೈಕೆ ರಾಜಕಾರಣದ ಪರಮಾವಧಿ ಎಂದಿದೆ.

ಪ್ರಚೋದನಕಾರಿ ಹೇಳಿಕೆ ಪ್ರಕಟಿಸಿರುವ ನವೀನ್ ಬಿಜೆಪಿಯ ಬೆಂಬಲಿಗ. ಆತ ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ತಾನು ಬಿಜೆಪಿಗೆ ಮತ ಹಾಕಿದ್ದು, ಈ ಬಾರಿ ಬಿಜೆಪಿ ಜಯ ಗಳಿಸಿದೆ ಎಂದು ಬರೆದುಕೊಂಡಿದ್ದ.

ಈತ ಶಾಸಕ ಅಖಂಡ ಶ್ರೀನಿವಾಸ ಅವರ ನೇರ ಸಂಬಂಧಿಯಾದರೂ, ಅವರೊಡನೆ ರಾಜಕೀಯ ಸಂಬಂಧ ಹೊಂದಿರಲಿಲ್ಲ ಎಂದು ಡಿಕೆಶಿ ಹೇಳಿದ್ದಾರೆ.

ಈತನ ಹೇಳಿಕೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಅದನ್ನು ತೆಗೆದುಕೊಂಡಿಲ್ಲ. ಇತ್ತೀಚೆಗೆ ನಮ್ಮ ಕಾರ್ಯಕರ್ತ ಕೇಂದ್ರ ಗೃಹ ಸಚಿವರ ವಿರುದ್ಧ ಕಾಮೆಂಟ್ ಮಾಡಿದ್ದಕ್ಕೆ ಸುಮೋಟೋ ಪ್ರಕರಣ ದಾಖಲಿಸಿಕೊಂಡ ರಾತ್ರೋರಾತ್ರಿ ಆತನನ್ನು ಬಂಧಿಸಿದ್ದರು.

ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ರಾಜಕೀಯ ಬಣ್ಣ ಬಿಜೆಪಿ, ಕಾಂಗ್ರೆಸ್ ನಾಯಕರ ನಡುವೆ ವಾಗ್ಯುದ್ಧ
ನಾನು ಆತನ ಹೇಳಿಕೆಯನ್ನೂ ವಿರೋಧಿಸಿದ್ದೇನೆ. ಈಗ ದೂರು ಕೊಟ್ಟರೂ ಅದನ್ನು ತೆಗೆದುಕೊಂಡಿಲ್ಲ. ಪೊಲೀಸರು ಈ ವಿಚಾರದಲ್ಲಿ ಸರಿಯಾದ ಕ್ರಮ ಕೈಗೊಳ್ಳದಿರುವುದೇ ಈ ಎಲ್ಲ ಅನಾಹುತಕ್ಕೆ ಕಾರಣ ಎಂದು ಶಿವಕುಮಾರ್‍ ಆರೋಪಿಸಿದ್ದಾರೆ.

ಇದಕ್ಕೆ ಅಷ್ಟೇ ಖಾರವಾಗಿ ಪ್ರತಿಕ್ರಿಯಿಸಿರುವ ಪ್ರವಾಸೊದ್ಯಮ ಸಚಿವ ರವಿ “ಆಏS” ಹೇಳಿಕೆ, ಬಾಂಧವರದ್ದೇನು ತಪ್ಪಿಲ್ಲ. #ನಾಚಿಕೆಯಾಗಬೇಕು ಇಂಥ ಜನ್ಮಕ್ಕೆ’ ಎಂದು ಟ್ವೀಟಿಸಿದ್ದಾರೆ.

ಗಲಭೆ ಎಬ್ಬಿಸಿದವರು ಬೆಂಕಿ ಹಾಕಿದವರ ಬಗ್ಗೆ ಮರುಕ! ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಬಹುದು ಎಂದೂ ರವಿ ಪ್ರಶ್ನಿಸಿದ್ದಾರೆ.

ಈ ಕೃತ್ಯಗಳನ್ನು ಖಂಡಿಸುವ ಬದಲು ಕಾಂಗ್ರೆಸ್ ಮುಖಂಡರು ಇದಕ್ಕೆ ಪ್ರಚೋದನೆ ನೀಡಿದ ವ್ಯಕ್ತಿ ಬಿಜೆಪಿ ಬೆಂಬಲಿಗ ಎಂದು ಹೇಳಿರುವುದು ಅವರ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights