ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಗೆ ತೀವ್ರ ಹಿನ್ನಡೆ : ಇಡಿ ವಿಚಾರಣೆಗೆ ಗ್ರೀನ್‌ ಸಿಗ್ನಲ್‌

ನವದೆಹಲಿಯಲ್ಲಿನ ತಮ್ಮ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಸಿಕ್ಕ 7 ಕೋಟಿ ರೂಪಾಯಿಗೂ ಅಧಿಕ ಮೊತ್ತದ ನಗದು ಹಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ ಕುರಿತು ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪು ಇಂದು ಹೈಕೋರ್ಟ್‌ ನಲ್ಲಿ ಹೊರ ಬಿದ್ದಿದ್ದು, ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಜಾರಿ ನಿರ್ದೇಶನಾಲಯದ ಸಮನ್ಸ್‌ ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ. ಹಣ ಅಕ್ರಮ ಮಾರ್ಗದಲ್ಲಿ ಬಂದಿದೆಯೋ ಇಲ್ಲವೋ ಎಂಬುದರ ಕುರಿತು ವಿಚಾರಣೆ ನಡೆಸುವ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಇದೆ‌ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights