ಡ್ರಾಪ್ ನೀಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಪಾಪಿ….!
ಪಾಪಿ ಕಾಮುಕನೊಬ್ಬ ಡ್ರಾಪ್ ನೀಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಮೆಣಸೆ ಬಳಿ ನಡೆದಿದೆ.
ಅಭಿ ಅತ್ಯಾಚಾರ ವೆಸಗಿದ ಆರೋಪಿ. ಆರೋಪಿ ಅಭಿ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದವನು. ಮೆಣಸೆಯಿಂದ ಶೃಂಗೇರಿಗೆ ಡ್ರಾಪ್ ನೀಡುವುದಾಗಿ ಹೇಳಿ ಮಾರ್ಗ ಮಧ್ಯೆ ಕೊರಡಕಲ್ಲು ಬಳಿ ಮಹಿಳೆ ಮೇಲೆ ಎರಗಿ ಅತ್ಯಾಚಾರವೆಸಗಿದ್ದಾನೆ.
ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಭಿನನ್ನ ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.