ತುಮಕೂರು ‌ಸಿದ್ದ ಗಂಗಾ ಮಠಕ್ಕೆ ನಮೋ ಭೇಟಿ : ಕನ್ನಡದಲ್ಲಿ ಮಾತು ಆರಂಭಿಸಿದ ಮೋದಿಜಿ

ತುಮಕೂರು ‌ಸಿದ್ದ ಗಂಗಾ ಮಠಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಿ ಮಠದ ಆವರಣದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ‌ ಸಲ್ಲಿಸಿದರು.ಅಲ್ಲಿಂದ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಿದ್ದಲಿಂಗ ಸ್ವಾಮೀಜಿ ಅವರು ಶಿವಕುಮಾರ ಸ್ವಾಮೀಜಿ ಪುತ್ತಳಿ ನೀಡಿ ಸನ್ಮಾನಿಸಿದರು.

ಈ ಬಳಿಕ ಮಠದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡದಲ್ಲಿಯೇ ತಮ್ಮ ಮಾತನ್ನು ಆರಂಭಿಸಿ, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಸೇರಿದಂತೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮಾತುಗಳ ಮೂಲಕ ಗಮನ ಸೆಳೆದರು.

ನನಗೆ ತುಮಕೂರಿಗೆ ಬರಲು ಸಂತೋಷವಾಗುತ್ತದೆ. ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಷಯಗಳು ಎಂಬುದಾಗಿ ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಸಿದ್ದಗಂಗಾ ಶ್ರೀಗಳಿಲ್ಲದ ಸಂದರ್ಭದಲ್ಲಿ ನಾನು ಆಗಮಿಸಿದ್ದಕ್ಕೆ ವಿಷಾದಿಸುತ್ತೇನೆ ಎಂದ ಅವರು, ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನು ಆಡಿದರು.

ಇನ್ನೂ ಮುಂದುವರೆದು ಮಾತನಾಡಿದ ಅವರು, ಪೌರತ್ವ ವಿರೋಧಿಗಳಿಗೆ ಖಡಕ್ ಸಂದೇಶ ಸಾರಿದ ಮೋದಿ, ಯಾವುದೇ ಧರ್ಮದವರಿಗೆ ಪೌರತ್ವ ತಿದ್ದುಪಡಿ ಮಸೂದೆಯಿಂದ ತೊಂದರೆಯಾಗದು. ಬಡ ವರ್ಗದವರಿಗಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ ದೇಶದ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಮಾನ್ಯ ಮುಖ್ಯಮಂತ್ರಿಗಳು, ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಶಿ, ಹಾಗೂ ಬೆಂಗಳೂರು ಜಿಲ್ಲಾ ಪಂಚಾತ್ ಅಧ್ಯಕ್ಷರು, ಡಿ‌ಜಿ. ನೀಲಮಣಿ ರಾಜು ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್, ಬೆಂಗಳೂರು ನಗರ ಜಿಲ್ಲಾಧಿಕಾರಿ, ಸರ್ಕಾರದ ಮುಖ್ಯಕಾರ್ಯದರ್ಶಿಗಳು ಹಾಜರಿದ್ದು ಮಾನ್ಯ ಪ್ರಧಾನ ಮಂತ್ರಿಗಳನ್ನು ಬರಮಾಡಿಕೊಂಡರು.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights