ತೆಲುಗು ಚಿತ್ರರಂಗದ ಜನಪ್ರಿಯ ಹಾಸ್ಯ ನಟ ವೇಣು ಮಾಧವ್ ಇನ್ನಿಲ್ಲ…!

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ವೇಣು ಮಾಧವ ವಿಧಿವಶರಾಗಿದ್ದಾರೆ. 39 ವರ್ಷದ ವೇಣು ಮಾಧವ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಸಿಕಂದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಈ ಮೊದಲು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಲಿವರ್ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ ಡಿಸ್ಚಾರ್ಜ್‌ ಮಾಡಿಸಿಕೊಂಡು ಮನೆಗೆ ಬಂದ ಬಳಿಕ ಅವರ ಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು.

ಹಾಗಾಗಿ ನಿನ್ನೆ ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ವರ್ಷಗಳ ಹಿಂದೆಯೇ ವೇಣು ಮಾಧವಗೆ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ಅವರು ಸಿನೆಮಾದಲ್ಲೂ ನಟಿಸಿರಲಿಲ್ಲ. ವೇಣು ಮಾಧವ 170ಕ್ಕೂ ಹೆಚ್ಚು ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ. ತಮಿಳಿನಲ್ಲೂ ಅಭಿನಯಿಸಿದ್ದಾರೆ.

ಇವರು ತೆಲುಗು, ತಮಿಳು ಸೇರಿದಂತೆ ಅನೇಕ ಭಾಷೆಗಳ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಟ ಚಿರಂಜೀವಿ, ಪ್ರಭಾಸ್, ಅಲ್ಲು ಅರ್ಜುನ್, ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಸೇರಿದಂತೆ ಅನೇಕ ಮೇರು ನಟರ ಜೊತೆ ನಟಿಸಿದ್ದರು.ಕಡಪ ಜಿಲ್ಲೆಯ ಸೂರ್ಯ ಪೇಟೆ ವೇಣು ಮಾಧವ್ ಅವರ ಹುಟ್ಟೂರು. ಮಿಮಿಕ್ರಿ ನಟನಾಗಿದ್ದ ವೇಣು ಮಾಧವ್ ಅವರು 1996 ರಲ್ಲಿ ಸಿನಿಮಾರಂಗ ಪ್ರವೇಶಿಸಿದ್ದರು. ಕೊನೆಯದಾಗಿ 2016 ರಲ್ಲಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಈಗ ವೇಣು ಮಾಧವ್ ಪತ್ನಿ ಶ್ರೀ ವಾಣಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights