ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಶ್ವಿನಿ ನಕ್ಷತ್ರ ಧಾರಾವಾಹಿಯ ಖ್ಯಾತ ನಟಿ….
ಧಾರವಾಹಿಯಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಪಡೆದಿದ್ದ ನಟಿ ಮುದ್ದು ಮುಖದ ಚೆಲುವೆ ಮಯೂರಿ ಹಸಮಣೆ ಏರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿ ತಾವು ಮದುವೆ ಮಾಡಿಕೊಂಡಿರುವುದನ್ನ ಖಚಿತಪಡಿಸಿದ್ದಾರೆ. 10 ವರ್ಷದಿಂದ ಪ್ರತೀಸುತ್ತಿದ್ದ ಗೆಳೆಯ ಅರುಣ್ ನನ್ನು ಮದುವೆ ಮಾಡಿಕೊಂಡಿದ್ದಾರೆ. ಇವರು ಕೃಷ್ಣ ಲೀಲಾ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಇಷ್ಟಕಾಮ್ಯ, ರುಸ್ತುಂ, ಆಟಕ್ಕುಂಟು ಲೆಕ್ಕಕ್ಕಿಲ್ಲ, ಮೌನಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬಣ್ಣಹಚ್ಚಿದ್ದರು.

ಮಯೂರಿ ಕುಟುಂಬ ಮೂಲಗಳ ಪ್ರಕಾರ, ಮದುವೆ ಶುಕ್ರವಾರದಂದು (ಜೂ.12) ನಡೆದಿದೆ. ಕೊರೋನಾ ಭೀತಿ ಹಿನ್ನೆಲೆಯಲ್ಲಿ ಆಪ್ತರು ಮಾತ್ರ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಕುಟುಂಬ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು.

ಮಯೂರಿ ಅವರು `ಅಶ್ವಿನಿ ನಕ್ಷತ್ರ’ ಧಾರವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿ, ಬಳಿಕ `ಕೃಷ್ಣ ಲೀಲಾ’ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟರು. `ಇಷ್ಟಕಾಮ್ಯ’, `ರುಸ್ತುಂ’ನಂತಹ ಭಿನ್ನ ಬಗೆಯ ಸಿನಿಮಾಗಳಲ್ಲಿ ನಟಿಸಿದ ನಂತರ, ಮಯೂರಿ `ಆಟಕ್ಕುಂಟು ಲೆಕ್ಕಕ್ಕಿಲ್ಲ’, `ಮೌನಂ’ ಚಿತ್ರಗಳಲ್ಲಿ ವಿಭಿನ್ನ ಪಾತ್ರದಲ್ಲಿ ಮಿಂಚಿದ್ದಾರೆ. ಸಂಪೂರ್ಣ ಹೊಸಬರೇ ಇರುವ `ಮೌನಂ’ ಸಿನಿಮಾದಲ್ಲಿ ಮಯೂರಿ ಅವರು ನಾಯಕಿಯಾಗಿ ನಟಿಸಿದ್ದರು. ರಾಜ್ ಪಂಡಿತ್ ನಿರ್ದೇಶನದ ಈ ಸಿನಿಮಾ ಇದೇ ವರ್ಷ ಫೆಬ್ರವರಿಯಲ್ಲಿ ರಿಲೀಸ್ ಆಗಿತ್ತು.
https://www.instagram.com/stories/mayurikyatari/

