ದೆಹಲಿ ಧಾರ್ಮಿಕ ಸಮಾರಂಭದಲ್ಲಿ ಭಾಗಿಯಾಗಿದ್ದ 6 ಜನ ಕೊರೊನಾದಿಂದ ಮೃತ…!

ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ನಡುವೆ ದೆಹಲಿಯ ನಿಜಾಮುದ್ದೀನ್ ನಲ್ಲಿ ಧಾರ್ಮಿಕ ಸಮಾರಂಭದಿಂದಾಗಿ ಕೊರೊನಾ ಸೋಂಕು ಹರಡಿ 6 ಜನ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.

ಹೌದು..  ಮಾ. 13ರಿಂದ 15ರವರೆಗೆ ದೆಹಲಿಯ ನಿಜಾಮುದ್ದೀನ್​ನಲ್ಲಿ ಧಾರ್ಮಿಕ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ವಿದೇಶೀಯರು ಕೂಡ ಭಾಗವಹಿಸಿದ್ದರು. ಈ ಸಭೆಯಲ್ಲಿ ಭಾಗವಹಿಸಿದ್ದ ತೆಲಂಗಾಣದ 6 ಜನರು  ಸಾವನ್ನಪ್ಪಿದ್ದಾರೆ. 300ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾ. 13ರಿಂದ 15ರವರೆಗೆ 5ರಿಂದ 6 ಫ್ಲೋರ್ ಬಿಲ್ಡಿಂಗ್ ನಲ್ಲಿ ನಡೆದಿದ್ದ ಸಭೆ ಇದಾಗಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಕೆಲವರನ್ನು ಈಗಾಗಲೇ ಹೋಂ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಭಾನುವಾರದಿಂದ 800ಕ್ಕೂ ಹೆಚ್ಚು ಜನರ ತಪಾಸಣೆ ಮಾಡಲಾಗಿದೆ. ಸಭೆ ವೇಳೆ ಇದ್ದವರು, ಅವರ ಸಂಪರ್ಕದಲ್ಲಿದ್ದವರ ತಪಾಸಣೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಮೌಲಾನಾ ವಿರುದ್ಧ ಕೇಸ್ ದಾಖಲಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ಇನ್ನೂ 9 ಜನರಿಗೆ ಕೊರೊನಾ ಸೋಂಕಿರುವುದು ಪತ್ತೆಯಾಗಿದೆ. 9 ಜನರ ಪೈಕಿ ಒಬ್ಬರ ಸಂಬಂಧಿಯಾಗಿರುವ ಇನ್ನೊಬ್ಬ ವ್ಯಕ್ತಿಗೂ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಶಂಕಿತರನ್ನು ಗುರುತಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲರನ್ನೂ ಪರೀಕ್ಷೆಗೊಳಪಡಿಸಲಾಗಿದೆ. ಅಲ್ಲದೆ ಯಾರ್ಯಾರು ದೆಹಲಿಗೆ ಭೇಟಿ ನೀಡಿದ್ದೀರೋ ಎಲ್ಲರೂ ತಕ್ಷಣವೇ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಗಾಗಿ ಎಂದು ತೆಲಂಗಾಣ ಸರ್ಕಾರ ಜನರಲ್ಲಿ ಮನವಿ ಮಾಡಿದೆ.

https://twitter.com/ANI/status/1244848747441356800

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights