ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಫಿಕ್ಸ್ : ಫೆ.8ಕ್ಕೆ ಮತದಾನ – 11ಕ್ಕೆ ಫಲಿತಾಂಶ

ದೆಹಲಿಯ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗಧಿ ಮಾಡಿದೆ. ಜನವರಿ 14ಕ್ಕೆ ಅಧಿಸೂಚನೆ ಹೊರಡಿಸಿದೆ. ಜನವರಿ 21 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ 8ಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಫೆಬ್ರವರಿ 11ಕ್ಕೆ ಫಲಿತಾಂಶ ಪ್ರಕಟವಾಗಿಲಿದೆ.

ಜೊತೆಗೆ ಈ ಬಾರಿ ಕೇಂದ್ರ ಚುನಾವಣಾ ಆಯೋಗ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗಿದೆ. ದಿವ್ಯಾಂಗರಿಗೆ ಅಂಚೆ ಮತದಾನರಿಗೆ ವ್ಯವಸ್ಥೆ ಮಾಡಲಾಗಿದೆ. ಅನಿವಾರ್ಯ ಕಾರಣಗಳಿಂದ ಮತಕಟ್ಟೆಗೆ ಬರಲು ಸಾಧ್ಯವಾಗದೇ ಇರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತದಾನದ ಒಟ್ಟು ಸಂಖ್ಯೆ ಹೆಚ್ಚಿಸುವ ದೃಷ್ಟಿಯಿಂದ ಈ ವ್ಯವಸ್ಥೆ ಕಲ್ಪಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights