ದೇಶದಲ್ಲಿ 5000 ಗಡಿ ದಾಟಿದ ಕೊರೊನಾ ಸೋಂಕಿತರು : ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ!

ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರೆಯುವ ಸಾಧ್ಯತೆ ಇದೆ ಎಂದು ರಾಜಕೀಯ ಮೂಲಗಳು ತಿಳಿಸಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ರಾತ್ರಿ 8 ಗಂಟೆಗೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 508 ಜನರಿಗೆ ಸೋಂಕು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 5000ಕ್ಕೆ ಏರಿಕೆ ಕಂಡಿದೆ. 24 ಗಂಟೆಯಲ್ಲಿ 13 ಮಂದಿ ಸಾವನ್ನಪ್ಪವ ಮೂಲಕ ಸಾವಿನ ಸಂಖ್ಯೆ 140ಕ್ಕೆ ಏರಿದೆ. ಈಗಾಗಲೇ ಸತತ ಚಿಕಿತ್ಸೆ ಮೂಲಕ 352 ಜನರನ್ನು ಗುಣಪಡಿಸಲಾಗಿದೆ.ದೇಶದಲ್ಲಿ ಸುಮಾರು 1.1 ಲಕ್ಷ ಜನರಿಗೆ ಕೋವಿಡ್-10  ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 66 ವಿದೇಶಿ ಪ್ರಜೆಗಳು ಇದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಸೋಂಕು ಹರಡುವುದನ್ನ ತಡೆಗಟ್ಟಲು ಕೇಂದ್ರ ಸರ್ಕಾರ ದೇಶಾದ್ಯಂತ ಏ.14ರವೆರೆಗೆ ಲಾಕ್ ಡೌನ್ ಘೋಷಿಸಿದೆ. ಈ ಅವಧಿ ಇನ್ನೇನು ಮುಕ್ತಾಯದ ಹಂತದಲ್ಲಿರುವಾಗಲೇ ಸೋಂಕಿತರ ಸಂಖ್ಯೆ ದಿನ ದಿಂದ ದಿನಕ್ಕೆ ವೇಗವಾಗಿ ಹೆಚ್ಚಾಗುತ್ತಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಸುವ ಸಾಧ್ಯತೆ ಕೂಡ ಇದೆ.ಇನ್ನೂ ದೆಹಲಿ, ಪಂಜಾಬ್, ಮದ್ಯಪ್ರದೇಶ, ತೆಲಂಗಾಣ, ಹರಿಯಾಣ, ಕೇರಳ, ಜಮ್ಮು ಮತ್ತು ಕಾಶ್ಮೀರ, ಗುಜರಾತ್, ಕರ್ನಾಟಕ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಸೋಂಕು ತೀವ್ರ ವೇಗವಾಗಿ ಹರಡುತ್ತಿದ್ದು ಈ ರಾಜ್ಯಗಳನ್ನು ಕೊರೊನಾ ಹಾಟ್ ಸ್ಪಾಟ್ ಎನ್ನಲಾಗುತ್ತಿದೆ. ಜೊತೆಗೆ ಈ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

ಹೀಗಾಗಿ ದೇಶದಲ್ಲಿ ವೇಗವಾಗಿ ಹರಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಮುಂದುವರೆಸುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಒಂದು ವೇಳೆ ಲಾಕ್ ಡೌನ್ ಮುಕ್ತಾಯಗೊಂಡರೆ ಸೋಂಕು ಇನ್ನೂ ವೇಗವಾಗಿ ದೇಶವ್ಯಾಪಿ ಹರಡುವ ಸಾಧ್ಯತೆಗಳು ಅಧಿಕವಾಗಿದ್ದು, ಕೇಂದ್ರ ಸರ್ಕಾರಕ್ಕೂ ಲಾಕ್ ಡೌನ್ ಮುಂದುವರೆಸುವಂತೆ ರಾಜ್ಯ ಸರ್ಕಾರಗಳಿಂದ ಒತ್ತಾಯ ಹೆಚ್ಚಾಗಿದೆ. ಏ. 14ರ ವರೆಗೆ ಪರಿಸ್ಥಿತಿ ಉಲ್ಬಣವಾಗುತ್ತಲೇ ಹೋದರೆ ಲಾಕ್ ಡೌನ್ ಮುಂದುವರೆಯುವುದರಲ್ಲಿ ಸಂಶಯವೇ ಇಲ್ಲ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights