ಧ್ವಜಾಹೋರಣಕ್ಕಾಗಿ ಘರ್ಷಣೆ: ಪಶ್ಚಿಮ ಬಂಗಾಳ ಬಿಜೆಪಿ ಕಾರ್ಯಕರ್ತನ ಹತ್ಯೆ!

ಸ್ವಾತಂತ್ರ್ಯ ದಿನಾಚರಣೆಯಂದು ಕಾರ್ಯಕ್ರಮದ ಸಂದರ್ಭದಲ್ಲಿ ರಾಷ್ಟ್ರಧ್ವಜ ಹಾರಿಸುವ ವಿಚಾರದಲ್ಲಿ ಘರ್ಷಣೆ ನಡೆದಿದ್ದು, ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೆ ಟಿಎಂಸಿ ಕಾರ್ಯಕರ್ತರೇ ಕಾರಣ ಎಂದು ಬಿಜೆಪಿ ಆರೋಪಿಸಿದ್ದು, ಟಿಎಂಸಿ ಆರೋಪವನ್ನು ತಳ್ಳಿಹಾಕಿದೆ.

ನಿನ್ನೆ ಮಧ್ಯಾಹ್ನ ಹೂಗ್ಲಿ ಜಿಲ್ಲೆಯ ಖನಕುಲ್ ಪ್ರದೇಶದಲ್ಲಿ ಧ್ವಜಾರೋಹಣ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿಗೆ ಮಾತು ಬೆಳೆದು ಅದು ಕೊಲೆಯಲ್ಲಿ ಅಂತ್ಯವಾಗಿದೆ. ಓರ್ವ ಬಿಜೆಪಿ ಕಾರ್ಯಕರ್ತ ಸುದರ್ಶನ್‌ ಪ್ರಾಮಾಣಿಕ್‌ ಎಂಬಾತ ಘರ್ಷಣೆಯಲ್ಲಿ ಸಾವನ್ನಪ್ಪಿದ್ದು, 8 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಆರಂಭಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಖಾನಕುಲ್ ಪ್ರದೇಶದಲ್ಲಿ ಧ್ವಜ ಹಾರಿಸಿದ್ದಕ್ಕೆ ಟಿಎಂಸಿ ಕಾರ್ಯಕರ್ತರು ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿ ಕೊಂದು ಹಾಕಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದಿನವೂ ನಮ್ಮ ಕಾರ್ಯಕರ್ತರನ್ನು ಅವರು ಸುಮ್ಮನೆ ಬಿಟ್ಟಿಲ್ಲ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.

ಬಿಜೆಪಿಯ ಆರೋಪವನ್ನು ಟಿಎಂಸಿ ನಿರಾಕಸಿದ್ದು, ಬಿಜೆಪಿಯೊಳಗಿನ ಜಗಳದಿಂದಾಗಿ ಕಾರ್ಯಕರ್ತ ಮೃತಪಟ್ಟಿದ್ದಾರೆ. ಇದರಲ್ಲಿ ಟಿಎಂಸಿ ಕಾರ್ಯಕರ್ತರ ಪಾತ್ರವೇನೂ ಇಲ್ಲ ಎಂದು ಟಿಎಂಸಿ ಪಕ್ಷದ ವಕ್ತಾರ ಪ್ರಬಿರ್ ಘೋಸಲ್ ಹೇಳಿದ್ದಾರೆ.


ಇದನ್ನೂ ಓದಿಸಂವಿಧಾನ ವಿರೋಧಿ ಮೋದಿ ಸರ್ಕಾರ; ಪ್ರಜಾಪ್ರಭುತ್ವದ ಆತ್ಮಾವಲೋಕನಕ್ಕೆ ಸಂದರ್ಭ: ಸೋನಿಯಾ ಗಾಂಧಿ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights