ನನ್ನ ತಲೆ ಕತ್ತರಿಸಿಬಿಡಿ; ಮಮತಾ ಬ್ಯಾನರ್ಜಿ ಅಸಹನೆ!

ಆಂಫಾನ್ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಒರಿಸ್ಸಾ ರಾಜ್ಯಗಳಿಗೆ ಅಪ್ಪಳಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಚಂಡಮಾರುತದ ಸಂಕಷ್ಟವನ್ನು ಪರಿಹರಿಸಲು ಸರ್ಕಾರ ಎಣಗಾಡುತ್ತಿದೆ. ವಿದ್ಯುತ್ ಸೇರಿದಂತೆ ಇತರ ಅಗತ್ಯ ಸೇವೆಗಳ ಪುನರ್ ಸ್ಥಾಪನೆಗೆ ಇನ್ನು ಸ್ವಲ್ಪ ದಿನಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಳಿದ್ದಾರೆ.

ಚಂಡಮಾರುತ ಅಪ್ಪಳಿಸಿ ಹಾನಿಯುಂಟಾಗಿ ಎರಡು ದಿನಗಳಾಗಿದೆಯಷ್ಟೆ. ರಾಜ್ಯದ ಪರಿಸ್ಥಿತಿಯನ್ನು ಮೊದಲಿನ ಸ್ಥಿತಿಗೆ ತರಲು ನಾವೆಲ್ಲರೂ ಹಗಲು-ರಾತ್ರಿ ಕೆಲಸ ಮಾಡುತ್ತಿದ್ದೇವೆ. ಸಹಾಯಕ್ಕೆ ಸೇನೆಯ ಮೊರೆ ಹೋಗಿದ್ದೇವೆ. ದಯಮಾಡಿ ಸ್ವಲ್ಪ ತಾಳ್ಮೆಯಿಂದ ಕಾಯಿರಿ. ಸಾಧ್ಯವಾದಷ್ಟು ಮೊದಲಿನ ಸ್ಥಿತಿಗೆ ತರಲು ನಾವು ಪ್ರಯತ್ನ ಪಡುತ್ತಿದ್ದೇವೆ ಎಂದು ಮಮತಾ ಬ್ಯಾನರ್ಜಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇಷ್ಟು ಹೇಳಿದ ಮೇಲೆಯೂ ನೀವು ನಿಮ್ಮ ಹಠ, ಪ್ರತಿಭಟನೆಯನ್ನು ಮುಂದುವರಿಸುತ್ತೀರಿ ಎಂದಾದರೆ ನನ್ನ ತಲೆ ಕಡಿಯಿರಿ ಎಂದು ತಮ್ಮ ಅಸಹನೆಯನ್ನು ಹೊರಹಾಕಿದರು ಮಮತಾ. ನಿನ್ನೆ ಕೋಲ್ಕತ್ತಾದಲ್ಲಿ ನೂರಾರು ಮಂದಿ ಬೀದಿಗೆ ಬಂದು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕ್ಷಿಪ್ರವಾಗಿ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು.

ಆಂಫಾನ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಬೆಳೆಹಾನಿ ಸೇರಿ 1 ಲಕ್ಷ ಕೋಟಿ ರೂಪಾಯಿ ಹಾನಿಯುಂಟಾಗಿದೆ ಎಂದು ಅಂದಾಜಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights