ನಾಳೆ ಶಿವರಾತ್ರಿ ಹಬ್ಬದ ಆಚರಣೆಗೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ..
ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶಿವರಾತ್ರಿ ಆಚರಣೆಗೆ ಸಿದ್ಧತೆ ಬಲೂ ಜೋರಾಗಿದೆ. ಮೈಸೂರು ಅರಮನೆಯ ತ್ರೀನೇಶ್ವರ ದೇವಾಲಯದ ಐತಿಹಾಸಿಕ ಚಿನ್ನದ ಕೊಳಗವನ್ನು ಜಿಲ್ಲಾಡಳಿತ, ಮುಜರಾಯಿ ಇಲಾಖೆಯಿಂದ ಅರ್ಚಕರಿಗೆ ಹಸ್ತಾಂತರ ಮಾಡಲಾಗಿದೆ.
ವರ್ಷಪೂರ್ತಿ ಜಿಲ್ಲಾ ಖಜಾನೆಯಲ್ಲಿರುವ ಬರೋಬ್ಬರಿ 11 ಕೆ.ಜಿ. ಅಪರಂಜಿ ಚಿನ್ನದ ಶಿವನ ಮುಖವಾಡವನ್ನು ಶಿವರಾತ್ರಿ ಮುನ್ನ ಖಜಾನೆಯಿಂದ ತೆಗೆದು ದೇವಾಲಯಕ್ಕೆ ಹಸ್ತಾಂತರ ಮಾಡಲಾಗಿದೆ.
ಈ ವೇಳೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ, ಮುಜರಾಯಿ ತಹಸೀಲ್ದಾರ್ ಯತಿರಾಜ್, ಅರಮನೆ ದೇವಾಲಯಗಳ ಕಾರ್ಯನಿರ್ವಹಣಾ ಅಧಿಕಾರಿ ಗೋವಿಂದರಾಜು, ತ್ರಿನೇಶ್ವರ ದೇವಾಲಯದ ಪ್ರಧಾನ ಅರ್ಚಕ ಸಂತಾನಂ, ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.
ಶಿವರಾತ್ರಿ ದಿನ ಶಿವಲಿಂಗಕ್ಕೆ ಕೊಳಗ ಧಾರಣೆ ಮಾಡಲಾಗುತ್ತದೆ. ಮೈಸೂರು ಅರಮನೆ ಆವರಣದಲ್ಲಿರುವ ತ್ರೀನೇಶ್ವರ ದೇವಾಲಯದ ಶಿವಲಿಂಗಕ್ಕೆ ಮುಖವಾಡ ಧಾರಣೆ ಮಾಡಿ ಸಾರ್ವಜನಿಕರ ದರ್ಶನದ ಬಳಿಕ ವಾಪಸ್ ಖಜಾನೆಯಲ್ಲಿ ಸಂರಕ್ಷಿಸಲಾಗುವುದು.
ಇದು ಮೈಸೂರು ಮಹಾರಾಜ ಜಯಚಾಮರಾಜ ಒಡೆಯರ್ ನೀಡಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಹುಟ್ಟಿದ ಸಂಭ್ರಮಕ್ಕಾಗಿ ಉಡುಗೊರೆಯಾಗಿ ಕೊಳಗ.

