ನಿತ್ಯೋತ್ಸವ ಕವಿಯ ಅಗಲಿಕೆಗೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಕನ್ನಡದ ಹಿರಿಯ ಸಾಹಿತಿ, ಕವಿ ಕೆ.ಎಸ್. ನಿಸಾರ್ ಅಹಮದ್ ಅವರ  ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. ಶಿವಮೊಗ್ಗದಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು ಹಾಗೂ ವಿಶೇಷ ಬಾಂಧವ್ಯ ಹೊಂದಿದ್ದರು.

2007 ರಲ್ಲಿ ಶಿವಮೊಗ್ಗದಲ್ಲಿ ನಡೆದ 73 ನೇ  ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ದ್ದವರು.  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಶ್ರೀ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಗೆ ಭಾಜನರಾಗಿದ್ದ ಅವರು ಕನ್ನಡದ ಎಲ್ಲ ಪ್ರಾಕಾರಗಳನ್ನು ಶ್ರೀಮಂತಗೊಳಿಸಿದ್ದರು.

ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿಬಿದ್ದಂತಾಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ನಿಸಾರ್ ಅಹಮದ್ ಅವರು ವಿಧಿವಶರಾಗಿರುವುದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಎಂ  ಎನ್  ನಂದೀಶ್ ಹಂಚೆ, ಕೃಷಿ ಸಚಿವ ಬಿ.ಸಿ.ಪಾಟೀಲ್, ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights