ನೆರೆ ಸಂತ್ರಸ್ತರ ಪರಿಹಾರ ವಿಚಾರ : ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಯತ್ನಾಳ ವಾಗ್ದಾಳಿ

ನೆರೆ ಸಂತ್ರಸ್ತರ ಪರಿಹಾರ ವಿಚಾರಕ್ಕೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ  ಪಾಟೀಲ ಯತ್ನಾಳ ವಾಗ್ದಾಳಿ ಮಾಡಿದ್ದಾರೆ.

ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಯತ್ನಾಳ ಗರಂ ಆಗಿದ್ದಾರೆ.ಕರ್ನಾಟಕದಲ್ಲಿ ಹಣವಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದರೆ ನಾನು ಸುಮ್ಮನೆ ಕೂಡುವುದಿಲ್ಲ. ಬೇಜವಾಬ್ದಾರಿಯುತ ಹೇಳಿಕೆಗೆ ಉತ್ತರ ಕರ್ನಾಟಕ ಕಣ್ಣು ಮುಚ್ಚಿ ಕೂಡುವುದಿಲ್ಲ. ಸಂಸದ ತೇಜಸ್ವಿ ಸೂರ್ಯ ನೀಡಿರುವ ಹೇಳಿಕೆಯನ್ನು ವಾಪಸ್ಸು ಪಡೆಯಬೇಕು.

ನಾವೇನು ಕೇಂದ್ರದಿಂದ ಭೀಕ್ಷೆ ಕೇಳ್ತಿಲ್ಲ. ಸಂತ್ರಸ್ತರು ಕಣ್ಣೀರು ಹಾಕ್ತಾ ಇದ್ದಾರೆ. ಬೇಜವಾಬ್ದಾರಿಯುತ ಹೇಳಿಕೆ ನೀಡುವವರು ಸ್ಥಳಕ್ಕೆ ಬಂದು ನೋಡಲಿ. ಉತ್ತರ ಕರ್ನಾಟಕದ ಬಗ್ಗೆ ಕೀಳು ಮಟ್ಟದ ಮಾತು ಕೇಳಿಕ್ಕೆ ಜನಪ್ರತಿನಿಧಿಗಳು ಸತ್ತಿಲ್ಲ.ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗ ಧ್ವನಿ ಎತ್ತುತ್ತೇನೆ. ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಬಂದಿಲ್ಲ. ಉತ್ತರ ಕರ್ನಾಟಕದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ತಕ್ಷಣ ರೂ. 5 ಸಾವಿರ ಕೋಟಿ ಪರಿಗಾರ ಹಣ ಬಿಡುಗಡೆ ಮಾಡಬೇಕು.

ಸಿಎಂ ಎಲ್ಲ ಸಂಸದರು, ಸಚಿವರ ನಿಯೋಗವನ್ನು ಪ್ರಧಾನಿ ಮೋದಿ ಹತ್ತಿರ ನಿಯೋಗ ತೆಗೆದುಕೊಂಡು ತೆಗೆದುಕೊಂಡು ಹೋಗಲಿ.ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ಕೇಂದ್ರ ಸರಕಾರ ನಮ್ಮ ನ್ಯಾಯಯುತ ಬೇಡಿಕೆ ಈಡೇರಿಸಬೇಕು.ಅದಕ್ಕಾಗಿನೇ ಪ್ರಧಾನಿ ಮೋದಿಯವರನ್ನು ನೋಡಿ ಕರ್ನಾಟಕದಿಂದ 25 ಜನ ಸಂಸದರನ್ನು ಜನ ಆರಿಸಿ ಕಳಿಸಿದ್ದಾರೆ ಎಂದು ಯತ್ನಾಳ ಗುಡುಗಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights