ಪಾದರಾಯನಪುರದಲ್ಲಿ ಕಿಡಿಗೇಡಿಗಳ ಅಟ್ಟಹಾಸ : ಹೋ ಕ್ವಾರಂಟೈನ್ ಗೆ ವಿರೋಧಿಸಿ ಗಲಾಟೆ

ಪಾದರಾಯನಪುರದಲ್ಲಿ ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್ ವಿರುದ್ಧ ಗಲಾಟೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಸಿಸಿ ಕ್ಯಾಮರಾ ಮತ್ತು ಮೊಬೈಲ್ ದೃಶ್ಯಾವಳಿಗಳನ್ನು ಆಧರಿಸಿ ಶಂಕಿತರನ್ನು ಜೆ.ಜೆ.ನಗರ ಠಾಣೆ ಪೊಲೀಸರು ಬಂಧಿಸಿದ್ದು, ದಾಂಧಲೆ ಎಸಗಿದವರ ವಿರುದ್ಧ ನಾಲ್ಕು ಪ್ರತ್ಯೇಕ ಎಫ್ಐಆರ್ ಗಳನ್ನು ದಾಖಲಿಸಿಕೊಂಡಿದ್ದಾರೆ.

ಹೌದು… ಪಾದರಾಯನಪುರದಲ್ಲಿ ಪೊಲೀಸರು, ವೈದ್ಯರು ಮತ್ತು ಆಶಾಕಾರ್ಯಕರ್ತೆಯರ ವಿರುದ್ಧ ದಾಂಧಲೆಗೆ ಮುಂದಾಗಿದ್ದು ಪುಂಡರ ವಿರುದ್ಧ ಇದೀಗ ಪೊಲೀಸರು  ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಐಪಿಸಿ ಸೆಕ್ಷನ್ 353, 307, ಎನ್ ಡಿಎಂಎ 353, 332, 354, 201ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಜೊತೆಗೆ ಪಾದರಾಯನಪುರ ಕಂಪ್ಲೀಟ್ ಸೀಲ್ ಡೌನ್, ಹೆಜ್ಜೆ ಹೆಜ್ಜೆಗೂ ಸರ್ಪಗಾವಲು ವಿಧಿಸಲಾಗಿದೆ.

ಅಷ್ಟಕ್ಕೂ ಆಗಿದ್ದೇನು? ಪಾದರಾಯನಪುದಲ್ಲಿ ಕ್ವಾರೆಂಟೈನ್ ಗೆ ಒಳಪಡಿಸಲು ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿ ತೆರಳಿದ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೆರಳಿದ ಕೆಲವರು ಸೀಲ್ ಡೌನ್ ಮಾಡಿರುವ ಏರಿಯಾದಲ್ಲಿ ಅಳವಡಿಸಿದ ಬ್ಯಾರಿಕೇಡ್ ಹಾಗೂ ತಗಡುಗಳನ್ನು ಕಿತ್ತೆಸೆದು ಗಲಾಟೆ ಮಾಡಿದ್ದಾರೆ.

ಈ ವೇಳೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಅನ್ನು ಎಳೆದು ಬಿಸಾಕಿದ್ದ ಓರ್ವ ಮಹಿಳೆಯನ್ನೂ ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಮಹಿಳೆಯನ್ನು ಫರೋಜಾ ಅಲಿಯಾಸ್ ಲೇಡಿಡಾನ್ ಎಂದು ಗುರುತಿಸಲಾಗಿದ್ದು, ಈ ಹಿಂದೆ ಇದೇ ಮಹಿಳೆ ಗಾಂಜಾ ಮಾರಾಟ ಮಾಡಿ ಪೊಲೀಸರ ಅತಿಥಿಯಾಗಿದ್ದಳು ಎನ್ನಲಾಗಿದೆ. ಈಕೆಯೇ ಗಲಾಟೆಗಾಗಿ ಹುಡುಗರನ್ನು ಕರೆಸಿದ್ದಾಳೆ ಎಂಬ ಮಾಹಿತಿ ಇದೆ. ಹೀಗಾಗಿ ಆಕೆಯನ್ನೂ ಬಂಧಿಸಲಾಗಿದೆ. ಅಲ್ಲದೆ ಆಕೆ ನೀಡಿರುವ ಮಾಹಿತಿ ಮೇರೆಗೆ 20ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದ ಸ್ಥಳೀಯ ಕಾರ್ಪೋರೇಟರ್ ಇಮ್ರಾನ್ ಪಾಷಾ, ಕೆಲ ಯುವಕರು ದಾಳಿ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಂದು ಭಾನುವಾರ ಆಗಿದ್ದರಿಂದ ಪೊಲೀಸರು ಸಹ ಕಡಿಮೆ ಸಂಖ್ಯೆಯಲ್ಲಿದ್ದರು. ಈ ರೀತಿ ಘಟನೆ ನಡೆದಿದ್ದು, ಇದೇ ಮೊದಲು ಪಾದರಾಯನಪುರದ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಇಲ್ಲ. ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹಾರಿಕೆಯ ಉತ್ತರವನ್ನು ನೀಡಿದ್ದಾರೆ.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights