ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ ಆರಂಭದ ದಿನವೇ ಪ್ರಶ್ನೆಪತ್ರಿಕೆ ಸೋರಿಕೆ..!

ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ ಆರಂಭದ ದಿನವೇ ಪ್ರಶ್ನೆಪತ್ರಿಕೆ ಸೋರಿಕೆಯಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪಿಯು ಕಾಲೇಜಿನಲ್ಲಿ ನಡೆದಿದೆ.

ಹೌದು… ಇಂದು ಬೆ. 10.30 ರಿಂದ ಮ. 1.30ರ ವರೆಗೆ ಭೌತಶಾಸ್ತ್ರ ಪರೀಕ್ಷೆ ಇತ್ತು. ಮೊದಲ ಪರೀಕ್ಷೆ ಆರಂಭವಾಗಿ ಒಂದೇ ಗಂಟೆಯಲ್ಲಿ ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ. ಕಿಡಿಗೇಡಿಗಳು ಪರೀಕ್ಷಾ ಕೊಠಡಿಯಲ್ಲಿ ಕುಳಿತ ಪರೀಕ್ಷಾರ್ಥಿಯ ಕೈನಲ್ಲಿನ ಪ್ರಶ್ನೆ ಪತ್ರಿಕೆಯ ಪೋಟೋ ಕ್ಲಿಕ್ಕಿಸಿಕೊಂಡು ಈ ಅವಾಂತರವನ್ನು ಸೃಷ್ಟಿಸಿದ್ದಾರೆ. ಫೋಟೋ ಕ್ಲಿಕ್ಕಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ವೈರಲ್ ಆಗಿದೆ.

ಆದರೆ ಇದರಲ್ಲಿ ಕಾಲೇಜಿನ ಸಿಬ್ಬಂದಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರ ಸುತ್ತ ಬಿಗಿ ಭದ್ರತೆ ಇದ್ದರೂ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಬವಿಸಿದ್ದು ಪೋಷಕರಲ್ಲಿ ಆತಂಕ ಸೃಷ್ಟಿ ಮಾಡಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights