ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ : ಭೇಟಿಗೆ ನಿರ್ಬಂಧ!

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಅವರ ಉಸಿರಾಟದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಎನ್ನಲಾಗಿದೆ.

ಆದಕಾರಣ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಿ ದೆಹಲಿಯ ಏಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೆ ರಾತ್ರಿ ಪೇಜಾವರ ಶ್ರೀಗಳಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ಅದರ ವರದಿ ಬಂದ ಬಳಿಕ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಬೆಂಗಳೂರಿನಿಂದ ನುರಿತ ಇಬ್ಬರು ವೈದ್ಯರು ಧಾವಿಸಿದ್ದು, ವೈದ್ಯರ ತಂಡ ಮತ್ತಷ್ಚು ನಿಗಾ ವಹಿಸಿದೆ. ಕಳೆದ ರಾತ್ರಿ ಶ್ರೀಗಳಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿದ್ದು, ಈ ವರದಿಗಾಗಿ ವೈದ್ಯರು ಎದುರುನೋಡುತ್ತಿದ್ದಾರೆ. ಈ ನಡುವೆ ಶ್ರೀಗಳ ಯೋಗಕ್ಷೇಮ ವಿಚಾರಣೆಗೆ ಗಣ್ಯರ ದಂಡೇ ಧಾವಿಸುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ಅಡ್ಡಿಯಾಗುತ್ತಿದೆ. ಹೀಗಾಗಿ ಆಸ್ಪತ್ರೆಗೆ ಗಣ್ಯರ ಭೇಟಿಗೆ ನಿರ್ಬಂಧ ವಿಧಿಸುವುದಾಗಿ ಕೆಎಂಸಿ ವೈದ್ಯಕೀಯ ಆಧೀಕ್ಷಕರು ಸ್ಪಷ್ಟಪಡಿಸಿದ್ದಾರೆ.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights