ಪೇಜಾವರ ಶ್ರೀ ಇನ್ನಿಲ್ಲ; ಇಂದು ರಾತ್ರಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆ
ತೀವ್ರ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳು ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾಗಿದ್ದಾರೆ ಎಂದು ವೈಧ್ಯರು ತಿಳಿಸಿದ್ದಾರೆ.
ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಕಳೆದ ಎರಡು ದಿನಗಳಿಂದ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದರು. ಬೆಂಗಳೂರಿನಿಂದ ನುರಿತ ಇಬ್ಬರು ವೈದ್ಯರು ಧಾವಿಸಿದ್ದರೂ ಕಡೆಗೆ ಏನೂ ಪ್ರಯೋಜನವಾಗಲಿಲ್ಲ.
ಮಧ್ಯಾಹ್ನ 2 ಗಂಟೆವರೆಗೆ ಉಡುಪಿಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಿದ್ದು, ನಂತರ ಬೆಂಗಳೂರು ನ್ಯಾಶನಲ್ ಕಾಲೇಜ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬೆಂಗಳೂರಿನ ಮಠದಲ್ಲಿ ಸಂಜೆ ಅಂತಿಮ ವಿಧಿ ವಿಧಾನ ನಡೆಸಲಾಗುವುದು.