ಪೌರತ್ವ ತಿದ್ದುಪಡಿ ವಿರೋಧಿಸಿ ಪ್ರಚೋದನಕಾರಿ ಬೆಳವಣಿಗೆ ಕಂಡುಬಂದರೆ ಹುಷಾರ್…!
ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆಗಳು ತಾರಕಕ್ಕೇರಿರುವ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ಇಂದು ಮಾತನಾಡಿದ ಅವರು ಬೆಂಗಳೂರಿನಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಸಂಬಂಧ ಯಾವುದೇ ಪ್ರತಿಭಟನೆಗೆ ಅವಕಾಶ ಇಲ್ಲ. ಒಂದು ವೇಳೆ ಪ್ರತಿಭಟನೆ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೆಲ ಶಿಕ್ಷಣ, ಸಂಸ್ಥೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿಡಿಯೋ ಗ್ರಾಫ್ ಅಧಾರದ ಮೇಲೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಪ್ರತಿಭಟನೆಗೆ ಅವಕಾಶ ಕೋರಿ ಸಾಕಷ್ಟು ಅರ್ಜಿಗಳು ಬಂದಿದ್ದವು. ಇಲ್ಲಿವರೆಗೂ ಯಾರಿಗೂ ಅನುಮತಿ ಕೊಟ್ಟಿಲ್ಲ ಎಂದರು. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಗಳನ್ನು ಹಾಕುತ್ತಿದ್ದಾರೆ. ಅಂತವರ ಮೇಲೆ ಐಟಿ ಸೆಲ್ನಿಂದ ನಿಗಾ ವಹಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದರು….