ಪ್ಯಾಟೆ ಹುಡುಗಿ ಹಳ್ಳಿ ಲೈಫ್​ ಖ್ಯಾತಿಯ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ದುರ್ಮರಣ…!

ಪ್ಯಾಟೆ ಹುಡುಗಿ ಹಳ್ಳಿ ಲೈಫ್- 4 ವಿನ್ನಲ್ ಮೆಬೀನಾ ಮೈಕಲ್ ರಸ್ತೆ ಮಂಡ್ಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಹೌದು… ಶಾಕ್ ಆದರೂ ಇದು ನಿಜಾನೇ.. ಪ್ಯಾಟೆ ಹುಡುಗಿ ಹಳ್ಳಿ ಲೈಫ್ ಖ್ಯಾತಿಯ ಮೆಬೀನಾ ಮೈಕಲ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೆಬೀನಾ ಬೆಂಗಳೂರಿನಿಂದ ಸೋಮವಾರ ಪೇಟೆಯತ್ತ ಕಾರಿನಲ್ಲಿ ತೆರಳುತ್ತಿದ್ದರು. ದೇವಿಹಳ್ಳಿ ಬಳಿ ಇರುವ ತಿರುವಿನಲ್ಲಿ ಕಾರು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೆಬೀನಾ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ಬಳಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.

ಬೆಂಗಳೂರಿನಿಂದ ಸೋಮವಾರಪೇಟೆಗೆ ಕೆಎ 02 ಎಎಫ್ 4796 ಸಂಖ್ಯೆಯ ಕಾರು ತೆರಳುತ್ತಿತ್ತು. ಹಾಸನ ಕಡೆಯಿಂದ ಯೂಟರ್ನ್ ಆಗುತ್ತಿದ್ದ ಟ್ರ್ಯಾಕ್ಟರಿಗೆ ಕಾರು ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರನ್ನು ಹಳ್ಳಿ ಹೈದ ಪ್ಯಾಟೆಗ್ ಬಂದ ಕಾರ್ಯಕ್ರಮದ ತಂಡದವರು ಎನ್ನಲಾಗಿದೆ. ಮೇಬಿನಾ ಸೇರಿದಂತೆ ಮೂವರು ಕೊಡಗಿನ ಸೋಮವಾರಪೇಟೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಲಭಿಸಿದೆ. ಬೆಳ್ಳೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇವರೊಂದಿಗೆ ಇದ್ದ ಇನ್ನಿಬ್ಬರ ಸ್ಥಿತಿ ತೀವ್ರ ಗಂಭೀರವಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅವರನ್ನು ಆದಿ ಚುಂಚನಗಿತಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಮೆಬೀನಾ ಖಾಸಗಿ ವಾಹಿನಿ ನಡೆಸುತ್ತಿದ್ದ ಪ್ಯಾಟೆ ಹುಡುಗಿ ಹಳ್ಳಿ ಲೈಫ್​ ರಿಯಾಲಿಟಿ ನಾಲ್ಕನೇ ಸೀಜನ್​ನ ವಿನ್ನರ್​ ಆಗಿದ್ದರು. ಇವರು ಮಾಡೆಲಿಂಗ್​ ಕೂಡ ಮಾಡುತ್ತಿದ್ದರು. ಸಾಮಾಜಿಕ ಜಾಲತಾಣದಲ್ಲೂ ಮೆಬೀನ್​ ಸಕ್ರಿಯರಾಗಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights