ಪ್ರೀತಿಸಿ ಮೋಸಹೋದ ನಟಿ; ವಿಡಿಯೋ ಮಾಡಿಟ್ಟು ಆತ್ಮಹತ್ಯೆ

ಕನ್ನಡ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೀರಿಯಲ್ ಹಾಗೂ ಜಾಹಿರಾತುಗಳಲ್ಲಿ ನಟಿಸಿದ್ದ ಚಂದನ (29) ಆತ್ಮಹತ್ಯೆ ಮಾಡಿಕೊಂಡ ನಟಿ.

ತಾವರೆಕೆರೆಯ  ಕೃಷ್ಣಮೂರ್ತಿ ನಗರದಲ್ಲಿ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ದಿನೇಶ್ ಮೋಸ ಮಾಡಿದ್ದಾನೆ ಎಂದು ಸಾವಿಗೂ ಮುನ್ನ ಆಕೆ ಸೆಲ್ಫಿ ವಿಡಿಯೋ ಮಾಡಿಟ್ಟು, ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಚಂದನ ಹಾಗೂ ದಿನೇಶ್ ಕಳೆದ ಐದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಎರಡು ಮನೆಯಲ್ಲೂ ಮದುವೆಗೆ ಒಪ್ಪಿಗೆ ಕೂಡಾ ನೀಡಲಾಗಿತ್ತು. ಮದುವೆಯಾಗುವುದಾಗಿ ನಂಬಿಸಿದ್ದ ವಂಚಿಸಿದ್ದ ದಿನೇಶ್‌, 5 ಲಕ್ಷ ಹಣವನ್ನು ಪಡೆದುಕೊಂಡಿದ್ದ ಎನ್ನಲಾಗಿದೆ.

ಆದರೆ, ಈಗ ಮದುವೆಯಾಗಲು ದಿನೇಶ್ ನಿರಾಕರಿಸಿದ ಹಿನ್ನೆಲೆಯಲ್ಲಿ ಚಂದನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಂದನ ಅವರ ಪೊಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

 

ಯುವತಿ ಆತ್ಮಹತ್ಯೆ ಸುದ್ದಿ ತಿಳಿದು ದಿನೇಶ್ ಪರಾರಿಯಾಗಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಆರೋಪಿ ದಿನೇಶನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights