ಫಲಿಸದ ಪ್ಲಾಸ್ಮಾ ಥೆರಪಿ; ಚಿಕಿತ್ಸೆ ಪಡೆದ ಮಹಿಳೆ ಸಾವು

ಕೊರೋನಾ ಸೋಂಕಿನ ನಿವಾರಣೆಗೆ ಉಪಯುಕ್ತವಾಗುತ್ತಿದೆ ಎಂದು ಹೇಳಲಾಗುತ್ತಿದ್ದ ಪ್ಲಾಸ್ಮಾ ಥೆರಪಿಯ ಮೇಲಿನ ಭರವಸೆಯು ಕ್ಷೀಣಿಸುವ ಸಾಧ್ಯತೆ ಕಂಡುಬರುತ್ತಿದೆ. ಕೊರೋನಾ ಸೋಂಕಿರಿಗೆ ಚಿಕಿತ್ಸೆ ನೀಡಲು  ಪ್ಲಾಸ್ಮಾ ಥೆರಪಿ ಮಾಡಲುಹಲವು ರಾಜ್ಯಗಳು ಮುಂದಾಗಿದ್ದವು. ಆದರೆ, ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಮಹಿಳೆ ಮೃತಪಟ್ಟಿದ್ದಾರೆ.

ಕೊರೋನಾ ಸೋಂಕಿತನಿಗೆ ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಪಡೆದ ವ್ಯಕ್ತಿ ಸೋಂಕಿನಿಂದ ಗುಣಮುಖರಾಗಿದ್ದರು. ಇದು ದೇಶಾದ್ಯಂತ ಸೋಂಕಿಗೆ ಚಿಕಿತ್ಸೆ ನೀಡುವ ಹೊಸ ಭರವಸೆಯನ್ನು ಹುಟ್ಟುಹಾಕಿತ್ತು. ಆದರೆ, ಪ್ಲಾಸ್ಮಾ ಚಿಕಿತ್ಸೆ ಪಡೆದ ಮಹಿಳೆಯ ಸಾವು ಆ ಭರವಸೆಯನ್ನು ಹುಸಿಗೊಳಿಸಿದಂತಿದೆ.

ಕೊರೋನಾಗೆ ಪ್ಲಾಸ್ಮಾ ಚಿಕಿತ್ಸೆ ಅಂಗೀಕೃತವಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ನಡೆಸದಿದ್ದರೆ ಸಾವೂ ಸಂಭವಿಸಬಹುದು ಎಂದು ಕೇಂದ್ರ ಸರ್ಕಾರ ಈ ಹಿಂದೆ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಈ ಘಟನೆ ನಡೆದಿದೆ.

ಏ.20ರಂದು ಲೀಲಾವತಿ ಆಸ್ಪತ್ರೆಗೆ ದಾಖಲಾದ 53 ವರ್ಷದ ಮಹಿಳೆಗೆ ಏ.25ರಿಂದ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತಿತ್ತು. ಆರಂಭದಲ್ಲಿ ಆರೋಗ್ಯ ಸುಧಾರಿಸಿದಂತೆ ಕಾಣಿಸಿದರೂ ನಂತರ ತೀವ್ರ ಉಸಿರಾಟದ ತೊಂದರೆಯಿಂದಾಗಿ ರೋಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮೃತ ರೋಗಿಗೆ ಕೊರೋನಾದಿಂದ ಗುಣಮುಖರಾದ ವ್ಯಕ್ತಿಯ 200 ಎಂಎಲ್ ಪ್ಲಾಸ್ಮಾವನ್ನು ಏ.25 ರಂದು ನೀಡಲಾಗಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights