ಬಸವಣ್ಣ ಹುಟ್ಟಿದ ನಾಡಿನಲ್ಲಿ ಹುಟ್ಟಿರುವುದು ನಮ್ಮ ಭಾಗ್ಯ: ಡಿಕೆಶಿ

‘ಬಸವಣ್ಣನವರ ನಾಡಿನಲ್ಲಿ ಹುಟ್ಟಿರುವುದು ನಮ್ಮೆಲ್ಲರ ಭಾಗ್ಯ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಬಸವ ಭವನದಲ್ಲಿ ಭಾನುವಾರ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಾವು ಅವರ ನೀತಿ, ವಚನಗಳನ್ನು ನಾವು ಉಸಿರಾಡುತ್ತಿದ್ದೇವೆ ಎಂದರು.

’12 ನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ, ಪ್ರಜಾಪ್ರಭುತ್ವದಲ್ಲಿ ಸಂಸತ್ತಿನ ಪರಿಕಲ್ಪನೆಗೆ ಅಡಿಪಾಯ ಹಾಕಿಕೊಟ್ಟವರು ಬಸವಣ್ಣನವರು. ಅದೇ ಸಂಸತ್ ವ್ಯವಸ್ಥೆಯಲ್ಲಿ ನಾವೀಗ ಕೆಲಸ ಮಾಡುತ್ತಾ ಪ್ರಜಾಪ್ರಭುತ್ವವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ.

ಬಸವಣ್ಣನವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುತ್ತಾ, ಅವರ ನೀತಿ, ವಚನಗಳನ್ನು ನಾವು ಉಸಿರಾಡುತ್ತಿದ್ದೇವೆ. ಅವರ ನಾಡಿನಲ್ಲಿ ಹುಟ್ಟಿರೋದು ನಮ್ಮ ಭಾಗ್ಯ ಎಂದು ಬಣ್ಣಿಸಿದರು.

’12 ನೇ ಶತಮಾನದಲ್ಲಿ ಅನುಭವ ಮಂಟಪವನ್ನು ಸ್ಥಾಪಿಸಿ, ಪ್ರಜಾಪ್ರಭುತ್ವದಲ್ಲಿ ಸಂಸತ್ತಿನ ಪರಿಕಲ್ಪನೆಗೆ ಅಡಿಪಾಯ ಹಾಕಿಕೊಟ್ಟವರು ಬಸವಣ್ಣನವರು. ಅದೇ ಸಂಸತ್ ವ್ಯವಸ್ಥೆಯಲ್ಲಿ ನಾವೀಗ ಕೆಲಸ ಮಾಡುತ್ತಾ ಪ್ರಜಾಪ್ರಭುತ್ವವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ’ ಎಂದರು.

ಬಸವಣ್ಣನವರ ಚಿಂತನೆ, ಕಾಂಗ್ರೆಸ್ ಚಿಂತನೆ. ಬಸವಣ್ಣನವರ ಪ್ರತಿ ಆದರ್ಶಗಳನ್ನು ಕಾಂಗ್ರೆಸ್ ಪಾಲನೆ ಮಾಡಿಕೊಂಡು ಬರುತ್ತಿದೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷನಾಗಿ ನಾಡಿನ ಜನತೆಗೆ ನಾನು ವಚನವನ್ನು ನೀಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಯಿ, ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮೀಜಿಗಳು, ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿಗಳು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಭಾಗವಹಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights