ಬಸ್ಸು ಕೊರತೆ : ಬಸ್ಸು ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ…
ಸರಿಯಾದ ಸಮಯಕ್ಕೆ ಬಸ್ಸು ಬರುತ್ತಿಲ್ಲ ಎಂದು ಬಸ್ಸು ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದ್ದಾರೆ. ಹಾವೇರಿ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ.
ಬೆಳಗ್ಗೆಯಿಂದ ಬಸ್ಸು ತಡೆದು ಪ್ರತಿಭಟನೆ ಮಾಡುತ್ತಿದ್ದರು. ಆದರೂ ಸ್ಥಳಕ್ಕೆ ಬಾರದ ಅಧಿಕಾರಿಗಳು ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದೇವಗಿರಿ ಗ್ರಾಮದಲ್ಲಿ ಇರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್ ಗೆ ಹಾವೇರಿಯಿಂದ ದೇವಗಿರಿ ಗ್ರಾಮಕ್ಕೆ ನಿತ್ಯ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಾರೆ.
ಸರಿಯಾದ ಸಮಯಕ್ಕೆ ಬಸ್ಸು ಇಲ್ಲದೆ ಖಾಸಗಿ ಆಟೋಗಳ ಮೊರೆ ಹೋಗುತ್ತಿದ್ದ ವಿದ್ಯಾರ್ಥಿಗಳು ಬೇಸತ್ತು ಪ್ರತಿಭಟನೆ ಕೈಗೊಂಡು ಪರಿಹಾರಕ್ಕೆ ಆಗ್ರಹಿಸಿದ್ದಾರೆ.

