ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿಗೂ ಕೊರೊನಾ ಪಾಸಿಟಿವ್!

ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಅವರಿಗೂ ಕೊರೊನಾ ಸೋಂಕು ತಗುಲಿದ್ದು. ಇಬ್ಬರೂ ದಕ್ಷಿಣ ದೆಹಲಿಯ ಸಾಕೇತ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಕೊರೋನವೈರಸ್ ರೋಗಲಕ್ಷಣಗಳು ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ 4 ದಿನಗಳ ಹಿಂದೆ ಬಿಜೆಪಿ ನಾಯಕನನ್ನು ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿದೆ.

ಇದಕ್ಕೂ ಮೊದಲು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪತ್ರಾ ಅವರಿಗೆ ಕೊರೋನವೈರಸ್ ರೋಗಲಕ್ಷಣಗಳು ಕಂಡುಬಂದಿದ್ದವು. ಅವರನ್ನು ಗುರಗಾಂವ್‌ನ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಬಿತ್ ಪತ್ರ ಅವರನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಜ್ವರ ಇದೆ. ಹೀಗಾಗಿ ಕೇಜ್ರಿವಾಲ್ ಮಂಗಳವಾರ ಬೆಳಿಗ್ಗೆ ಕೊರೋನವೈರಸ್ ಪರೀಕ್ಷೆಗೆ ಒಳಗಾಗಿದ್ದರು. ಅವರ ಪರೀಕ್ಷಾ ವರದಿಗಳು ಇನ್ನೂ ಬರಬೇಕಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights