ಬೆಂಕಿ ಹಚ್ಚಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸಾವು : ಆಕೆ ಕೊನೆ ಮಾತು ಏನು….?

ಅತ್ಯಂತ ಪ್ರಭಾವಿ ವ್ಯಕ್ತಿಗಳು ಭಾಗಿಯಾಗಿದ್ದ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಗುರುವಾರ ಮಧ್ಯಾಹ್ನ ಬೆಂಕಿ ಹಚ್ಚಲಾಗಿತ್ತು. ಕೋರ್ಟ್​ಗೆ ತೆರಳುತ್ತಿದ್ದ ಯುವತಿಯನ್ನು ಇದ್ದಕ್ಕಿದ್ದಂತೆ ಅಟ್ಟಿಸಿಕೊಂಡು ಬಂದ ಆಗಂತುಕರು ಆಕೆಗೆ ಬೆಂಕಿ ಹಚ್ಚಿ ಓಡಿ ಹೋಗಿದ್ದರು. ಈ ಘಟನೆಯಿಂದ ಯುವತಿಯ ದೇಹದ ಬಹುಪಾಲು ಸುಟ್ಟುಹೋಗಿತ್ತು. 40 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಜೀವನ್ಮರಣದ ನಡುವೆ ಹೋರಾಟ ನಡೆಸಿದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾಳೆ.

ಇನ್ನು ಸಾಯುವ ಮುನ್ನ ಸಂತ್ರಸ್ತೆ ‘ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು’ ಎಂದು ಹೇಳಿಕೊಂಡಿದ್ದರು. ಹೈದ್ರಾಬಾದ್ ಎನ್‍ಕೌಂಟರ್‍ನಿಂದ ಕೊಂಚ ಮಟ್ಟಿಗೆ ನಿರಾಳರಾಗಿದ್ದ ಬೆನ್ನಲ್ಲೇ ಈ ಆಘಾತಕಾರಿ ಬೆಳವಣಿಗೆಯಾಗಿದೆ.

ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights