ಬೆಳಗಾವಿಯಲ್ಲಿ ಕೊರೊನಾಕ್ಕೆ ಮೊದಲ ಬಲಿ : ರಾಜ್ಯದಲ್ಲಿ 12ಕ್ಕೇರಿದ ಸಾವಿನ ಸಂಖ್ಯೆ!

ಮಹಾಮಾರಿ ಕೊರೊನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ.

ಹೌದು.. ಕೊರೊನಾ ವೈರಸ್ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿ ರಾಜ್ಯದಲ್ಲಿ ಹೆಚ್ಚಾಗುತ್ತಲೇ ಇದೆ. ಇಂದು ಬೆಳಗಾವಿಯಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಂತ 80 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ರೋಗಿ- 224 ಸಂಪರ್ಕಕ್ಕೆ ಬಂದಿದ್ದ ವೃದ್ಧೆಗೆ ಸೋಂಕು ತಗುಲಿತ್ತು ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವಂತ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ. ಇದರೊಂದಿಗೆ  ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆ ಕಂಡಿದೆ.

ಒಟ್ಟು 279 ಸೋಂಕಿತರಲ್ಲಿ ಈಗಾಗಲೇ 75 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈಗಾಗಲೇ 12 ಜನರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಅತಿಹೆಚ್ಚು ಕೊರೋನಾ ಸೋಂಕಿತ ಜಿಲ್ಲೆಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಇಂದು ಪತ್ತೆಯಾದ ಹೊಸ ಕೊರೋನಾ ಪ್ರಕರಣಗಳಲ್ಲಿ ಮೈಸೂರು ಮೊದಲ ಸ್ಥಾನದಲ್ಲಿದೆ.

https://twitter.com/sriramulubjp/status/1250394867378737153

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights