ಭಾರತದಲ್ಲಿ 22.6 ಲಕ್ಕೇರಿದ ಕೊರೊನಾ ಕೇಸ್ : ಇಂದು ಪಿಎಂ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್
ಭಾರತದಲ್ಲಿ ಒಟ್ಟು ಕರೋನವೈರಸ್ ಪ್ರಕರಣಗಳ ಸಂಖ್ಯೆ 22,68,675 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ತಿಳಿಸಿದೆ. ಒಂದೇ ದಿನದ 53,601 ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಕೊರೊನಾವೈರಸ್ ಸಾವಿನ ಸಂಖ್ಯೆ 45,257 ಕ್ಕೆ ಏರಿದೆ. ಈವರೆಗೆ 15,83,489 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, ಪ್ರಸ್ತುತ 6,39,929 ಪ್ರಕರಣಗಳು ಸಕ್ರಿಯವಾಗಿವೆ.
ಹೀಗಾಗಿ ಇಂದು ಪಿಎಂ ಮೋದಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಕೊರೋನಾ ಸಂಬಂಧಿತ ಪರಿಸ್ಥಿತಿ ಕುರಿತು ಚರ್ಚಿಸಲು ನರೇಂದ್ರ ಮೋದಿ ಅವರು ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಪಂಜಾಬ್, ಬಿಹಾರ, ಗುಜರಾತ್, ತೆಲಂಗಾಣ, ಉತ್ತರ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

