ಭಾರತದಲ್ಲಿ 29 ಸಾವಿರ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ!
ದೇಶದಲ್ಲಿ ಕೋರೊನಾ ಪೀತಡಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಷ್ಟೇ ಪ್ರಯತ್ನ ಪಟ್ಟರೂ ಕೊರೊನಾ ನಿಯಂತ್ರಕ್ಕೆ ಬರುತ್ತಿಲ್ಲ. ಈ ನಡುವೆ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 29 ಸಾವಿರದ ಗಡಿ ದಾಟಿದೆ.
ಹೌದು… ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗುತ್ತಿದೆ. ನಿನ್ನೆ ಬೆಳಗ್ಗೆಯಿಂದ ಇಂದು ಮುಂಜಾನೆವರೆಗೆ ದೇಶದಲ್ಲಿ ಹೊಸದಾಗಿ 1,071 ಜನರಲ್ಲಿ ಸೋಂಕು ಪತ್ತೆಯಾಗಿದೆ. ನಿನ್ನೆ ಒಂದೇ ದಿನ 53 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,435ಕ್ಕೆ ಹಾಗೂ ಮೃತರ ಸಂಖ್ಯೆ 934ಕ್ಕೆ ಏರಿಕೆ ಆಗಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಪ್ರಕಾರ, ಈವರೆಗೆ ಕೊರೋನಾದಿಂದ ಕೊರೊನಾದ ಗುಣಮುಖರಾದವರು 6,868 ಜನರು ಮಾತ್ರ. ಸದ್ಯ ಕೊರೋನಾ ಪೀಡಿತರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ ಮರಣ ಪ್ರಮಾಣ ಶೇ.4.7ರಷ್ಟು ಹೆಚ್ಚಳಗೊಂಡಿದೆ. 440 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು 8068 ಮಂದಿ ಕೊರೊನಾ ಸೋಂಕಿತರಿದ್ದಾರೆ. ಒಟ್ಟಾರೆ ಭಾರತದಲ್ಲಿ ಮರಣ ಪ್ರಮಾಣ ಶೇ.3.13ರಷ್ಟು ಹೆಚ್ಚಾಗಿದ್ದು, ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ನಿಂದಾಗಿ ಮರಣ ಪ್ರಮಾಣ ಶೇ.4.24ರಷ್ಟು ಅಧಿಕವಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು, ವಿಶ್ವದೆಲ್ಲೆಡೆ 30.64 ಲಕ್ಷ ಜನರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಪ್ರಪಂಚದಾದ್ಯಂತ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 2.11 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇದುವರೆಗೂ 9.22 ಲಕ್ಷ ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ.

