ಭಾರತೀಯ ನೌಕಾಪಡೆಗೂ ಅಂಟಿದ ಕೊರೊನಾ : 21 ಸಿಬ್ಬಂದಿಯಲ್ಲಿ ಸೋಂಕು ಪತ್ತೆ

ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಭಾರತೀಯ ನೌಕಾಪಡೆಗೂ ಕೊರೊನಾ ವೈರಸ್ ಅಂಟಿಕೊಂಡಿದೆ.

ಹೌದು… ಮುಂಬೈನಲ್ಲಿ ಇರುವ 21 ಮಂದಿ ಸಿಬ್ಬಂದಿಗೆ ವೈರಸ್ ಹರಡಿರುವುದು ಖಚಿತವಾಗಿದೆ.ನೌಕಾಪಡೆಯ 20 ಸೇಲರ್ ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿ ಸೋಂಕಿಗೆ ತುತ್ತಾಗಿದ್ದಾರೆ. ಐಎನ್‍ಎಸ್ ಅಶ್ವಿನಿ ನೌಕಾಪಡೆ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸೋಂಕಿತರ ಸಂಪರ್ಕದಲ್ಲಿದ್ದ ಮಂದಿಯನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ಸೋಂಕಿತ ಸೇಲರ್ ಗಳು ಮುಂಬೈನ ಐಎನ್‍ಎಸ್ ಆಂಗ್ರೆಯಲ್ಲಿ ನೀಡಲಾಗಿದ್ದ ವಸತಿ ನಿಲಯಗಳಲ್ಲಿ ಇದ್ದರು. ಆಂಗ್ರೆ ನೌಕಾನೆಲೆ ಸರಕು ಸಾಗಣೆ ಮತ್ತು ಆಡಳಿತ ವ್ಯವಹಾರಗಳಲ್ಲಿನ ನೌಕಾ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಪಶ್ಚಿಮ ನೌಕಾಪಡೆ ಕಮಾಂಡ್‍ಗೆ ಸಹಕಾರಿಯಾಗಿದೆ.ಅಗತ್ಯ ಕರ್ತವ್ಯಗಳಿಗಾಗಿ ನೌಕಾಪಡೆ ವಲಯಗಳಲ್ಲಿ ಸಿಬ್ಬಂದಿ ಸಂಚರಿಸಿದ್ದರು.

ಈ ಹಿನ್ನೆಲೆ ಸಿಬ್ಬಂದಿಗೆ ಸೋಂಕು ತಗುಲಿದೆ ಎಂದು ಊಹಿಸಲಾಗಿದೆ. ಏಪ್ರಿಲ್ 7ರಂದು ನೌಕಾಪಡೆಯ ಸೇಲರ್ ಒಬ್ಬರಲ್ಲಿ ಸೊಂಕು ಕಾಣಿಸಿಕೊಂಡಿತ್ತು. ಸದ್ಯ 21 ಮಂದಿಗೆ ಕೊರೊನಾ ತಗುಲಿದೆ. ಆಂಗ್ರೆ ನೌಕಾನೆಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು, ಇಲ್ಲಿರುವ ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights