ಭಾರತೀಯ ಯೋಧನಲ್ಲಿ ಕೊರೊನಾ ಸೋಂಕು ಪತ್ತೆ : ಸೈನ್ಯದಲ್ಲಿ ಹೆಚ್ಚಾದ ಆತಂಕ..!

ವಿಶ್ವಾದ್ಯಂತ ವೇಗವಾಗಿ ಹರಡಿಕೊಳ್ಳುತ್ತಿರುವ ಕೊವಿಡ್-19 ಸೋಂಕು ಸದ್ಯ ಭಾರತೀಯ ಸೇನೆಯ ಮೇಲೆ ತನ್ನ ದೃಷ್ಟಿ ನೆಟ್ಟಿದೆ.

ಹೌದು… ಭಾರತೀಯ ಸೇನೆಯ ಯೋಧನಿಗೆ ಕೊರೊನಾ ಸೋಂಕು ತಗುಲಿರುವುದುದೃಢಪಟ್ಟಿದ್ದು ಸೈನ್ಯದಲ್ಲಿ ಆತಂಕ ಹೆಚ್ಚಿಸಿದೆ. ಲೇಹ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧನಲ್ಲಿ ಕೊರೊನಾ ಲಕ್ಷಣಗಳಾದ ಕೆಮ್ಮು, ನಗಡಿ, ಸೀನು, ತಲೆ ನೋವು ಕಾಣಿಸಿಕೊಂಡಿದ್ದವು. ಕೂಡಲೇ ಯೋಧನನ್ನು ಆಸ್ಪತ್ಎಗೆ ದಾಖಲಿಸಿ ಗಂಟಲಿನ ದ್ರವ್ಯ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಯೋದನೋರ್ವನಿಗೆ ಕೊರೊನಾ ಪಾಸಿಟಿವ್ ಇರುವುದರಿಂದ  ಸೈನ್ಯಯಲ್ಲಿ ಆಂತಕ ಹೆಚ್ಚಾಗಿದೆ.

ಸೈನಿಕನ ತಂದೆ ಫೆಬ್ರವರಿ 25 ರಿಂದ ಮಾರ್ಚ್ 1ರವರೆಗೆ ಇರಾನ್ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ಹಿಂದಿರುಗಿದ್ದರು. ತಂದೆಯಿಂದಲೇ ಯೋಧನಿಗೆ ಕೊರೊನಾ ತಗುಲಿದರ ಬಗ್ಗೆ ವರದಿಯಾಗಿವೆ. ದೇಶದಲ್ಲಿ ಈಗಾಗಲೇ ಕೊರೊನಾದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. 137 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಭಾರತ ಕೊರೊನಾ ಎರಡನೇ ಸ್ಟೇಜ್ ನಲ್ಲಿದೆ ಎಂದು ಐಸಿಎಂಆರ್ ಸ್ಪಷ್ಟಪಡಿಸಿದೆ.

ವಿಶ್ವಾದ್ಯಂತ 7 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಈಗಾಗಲೇ ಮೂರು ಜನ ಕೊರೋನಾ ವೈರಸ್​ಗೆ ಬಲಿಯಾಗಿದ್ದಾರೆ. ಕರ್ನಾಟಕದ ಕಲಬುರ್ಗಿ, ದೆಹಲಿ ಮತ್ತು ಮುಂಬೈನಲ್ಲಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದೆ.

ಕರ್ನಾಟಕ ರಾಜ್ಯಾದ್ಯಂತ ಕೊರೋನಾ ಭೀತಿ ಹೆಚ್ಚಾಗಿದ್ದು, ಈಗಾಗಲೇ 11 ಜನರಲ್ಲಿ ಕೊರೋನಾ ಪತ್ತೆಯಾಗಿದೆ. ಓರ್ವ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಕೊರೊನಾ ತಡೆಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಟೊಂಕ ಕಟ್ಟಿ ನಿಂತು ಕೆಲಸ ಮಾಡುತ್ತಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights