ಭಾರತ್ ಬಂದ್ ಹಿನ್ನಲೆ : ಮಡಿಕೇರಿಯಲ್ಲಿ ಬಸ್ ಮೇಲೆ ಕಲ್ಲು – ಚಿಕ್ಕಬಳ್ಳಾಪುರದಲ್ಲಿ ಹಲ್ಲೆ

ಭಾರತ್ ಬಂದ್ ಹಿನ್ನಲೆಯಲ್ಲಿ ಮಡೆಕೇರಿಯಲ್ಲಿ ಕಿಡಿಗೇಡಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಟೀ ಮಾರಾಟಗಾರನ ಮೇಲೆ  ಹಲ್ಲೆ ಮಾಡಿದ ಘಟನೆ ನಡೆದಿದೆ.

ಮಡಿಕೇರಿಯಲ್ಲಿ ಸರ್ಕಾರಿ ಬಸ್ ಯೊಂದಕ್ಕೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.ಇಂದು ಬೆಳಿಗ್ಗೆ ಮಡಿಕೇರಿಯಿಂದ ಮೈಸೂರಿಗೆ ಹೊರಟಿದ್ದ ಸರ್ಕಾರಿ ಬಸ್ ಗೆ ಮಡಿಕೇರಿ ನಗರದ ಹೊರವಲಯದ ಚೈನ್ ಗೇಟ್ ಬಳಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಇದರ ಪರಿಣಾಮ ಬಸ್ ನ ಗಾಜು ಪುಡಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ಬಗ್ಗೆ ಬಸ್ ಚಾಲಕ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನೂ ಭಾರತ್ ಬಂದ್‍ಗೆ ಕರೆ ನೀಡಿದರೂ ಟೀ ಅಂಗಡಿ ಓಪನ್ ಮಾಡಿದ್ದೀಯಾ ಎಂದು ಮಾಲೀಕನ ಮೇಲೆ ಪ್ರತಿಭಟನಾಕಾರರು ಹಲ್ಲೆಗೆ ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಂಪಂಗಿ ವೃತ್ತದಲ್ಲಿನ ಎಸ್‍ಎಲ್‍ಎನ್ ಕಾಂಡಿಮೆಂಟ್ಸ್ ಶಾಪ್ ಎಂದಿನಂತೆ ಆರಂಭವಾಗಿತ್ತು. ಈ ವೇಳೆ ಅಲ್ಲಿಗೆ ಬಂದ ಸಿಪಿಐಎಂ ಮುಖಂಡ ಲಕ್ಷ್ಮೀನಾರಾಯಣ ಎಂಬಾತ ಇಂದು ಬಂದ್ ಇದೆ. ನೀನು ಯಾಕೆ ಟೀ ಅಂಗಡಿ ಓಪನ್ ಮಾಡಿದ್ದೀಯಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ.

ಕೋಲಾರ: ಪ್ರತಿಭಟನೆಗಿಳಿದ ಕಾರ್ಮಿಕ ಮುಖಂಡರು ವಶಕ್ಕೆ

ಮುಷ್ಕರದ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಪ್ರತಿಭಟನೆಗಿಳಿದ ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಬೆಳಗ್ಗೆ ನಡೆಯಿತು.
ಸಿಐಟಿಯು, ಎಐಟಿಯುಸಿ ಮುಖಂಡರು ಕೋಲಾರದ ಸಾರಿಗೆ ಡಿಪೋ ಮುಂಭಾಗ ಬಸ್‌ಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ವೇಳೆ ಪೊಲೀಸರು ಸುಮಾರು 15 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಈ ನಡುವೆ ಮುಷ್ಕರದಲ್ಲಿ ಭಾಗಿಯಾದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸರಕಾರ ತನ್ನ ಉದ್ಯೋಗಿಗಳಿಗೆ ಎಚ್ಚರಿಕೆ ನೀಡಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights