ಭಾರತ-ಚೀನಾ ಗಡಿ ವಿವಾದ: ಮಧ್ಯಸ್ಥಿಕೆಗೆ ಮುಂದಾದ ಟ್ರಂಪ್; ನಂತರ ನಡೆದದ್ದೇನು?

ಭಾರತ ಮತ್ತು ಚೀನಾದ ಗಡಿ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಲು ಯುನೈಟೆಡ್ ಸ್ಟೇಟ್ಸ್ “ಸಿದ್ಧ ಮತ್ತು ಸಮರ್ಥ” ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.

ಮಧ್ಯಸ್ಥಿಕೆ ವಹಿಸುವ ನಿರ್ಧಾರವನ್ನು ಅಮೆರಿಕ ಈಗಾಗಲೇ ಎರಡೂ ದೇಶಗಳಿಗೆ ತಿಳಿಸಿದೆ ಎಂದು ಟ್ರಂಪ್ ಹೇಳಿದ್ದಾರೆ. ಗಡಿ ಉದ್ವೇಗವನ್ನು ಅವರು ‘ರೇಜಿಂಗ್’ ಎಂದೂ ಉಲ್ಲೇಖಿಸಿದ್ದಾರೆ.

ವಿಪರ್ಯಾಸವೆಂದರೆ, ಟ್ರಂಪ್ರ್ ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಚೀನಾದ ವಿದೇಶಾಂಗ ಸಚಿವಾಲಯವು ಗಡಿಯಲ್ಲಿನ ಪರಿಸ್ಥಿತಿ ” ಸ್ಥಿರ ಮತ್ತು ನಿಯಂತ್ರಿಸಲಾಗುತ್ತಿದೆ” ಎಂದು ಹೇಳಿದ್ದಾರೆ. ಚೀನಾದ ವಿದೇಶಾಂಗ ಕಚೇರಿ ವಕ್ತಾರ ಜೋವೋ ಲಿಜಿಯಾನ್, “ಪ್ರಾದೇಶಿಕ ಸಾರ್ವಭೌಮತ್ವ ಮತ್ತು ಸುರಕ್ಷತೆಯನ್ನು ಕಾಪಾಡಲು ಹಾಗೂ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು ಚೀನಾ ಬದ್ಧವಾಗಿದೆ” ಎಂದು ಹೇಳಿದ್ದಾರೆ.

ಭಾರತದ ಜೊತೆಗಿನ ಗಡಿ ಪ್ರದೇಶದಲ್ಲಿ “ ಸ್ಥಿರ ಮತ್ತು ನಿಯಂತ್ರಿಣ” ಸಾಧ್ಯವಿದೆ. ಸಂವಾದ ಮತ್ತು ಸಮಾಲೋಚನೆಯ ಮೂಲಕ ಸಮಸ್ಯೆಯನ್ನು ಪರಿಹರಿಸಲು ಉಭಯ ದೇಶಗಳು ಸರಿಯಾದ ಕಾರ್ಯವಿಧಾನಗಳು ಮತ್ತು ಸಂವಹನ ಮಾರ್ಗಗಳನ್ನು ಹೊಂದಿವೆ ಎಂದು ಅವರು ಹೇಳಿಕೆ ನೀಡಿದ್ದಾರೆ.

ಚೀನಾ ರಾಯಭಾರಿ ಸನ್ ವೀಡಾಂಗ್ ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಚೀನಾ ಮತ್ತು ಭಾರತ ತಮ್ಮ ಭಿನ್ನಾಭಿಪ್ರಾಯಗಳು ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳಿಗೆ ನೆರವಾಗಲು ಬಿಡಬಾರದು. ಸಂವಹನದ ಮೂಲಕ ಪರಿಸ್ಥಿತಿಯನ್ನು ಅರಿಯಬೇಕು. ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.

ಕಳೆದ ವಾರ, “ಚೀನಾವು ದಕ್ಷಿಣ ಚೀನಾ ಸಮುದ್ರದಲ್ಲಿರಲಿ ಅಥವಾ ಭಾರತದ ಗಡಿಯಲ್ಲಿರಲಿ, ಚೀನಾದ ಪ್ರಚೋದನೆಗಳು ಮತ್ತು ಗೊಂದಲದ ನಡವಳಿಕೆಯನ್ನು ನಾವು ನೋಡುತ್ತಲೇ ಇದ್ದೇವೆ. ಅದು ಚೀನಾ ತನ್ನ ಬೆಳೆಯುತ್ತಿರುವ ಶಕ್ತಿಯನ್ನು ಹೇಗೆ ಬಳಸಿಕೊಳ್ಳುತ್ತದೆ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ಅಮೆರಿಕಾದ ರಾಜತಾಂತ್ರಿಕ ಅಧಿಕಾರಿ ಆಲಿಸ್ ಜಿ ವೆಲ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಚೀನಾ, ಅಮೆರಿಕಾಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿತ್ತು.

ಭಾರತ ಮತ್ತು ಚೀನಾ ರಾಷ್ಟ್ರಗಳ ನಡುವಿನ ಸುಮಾರು 20 ದಿನಗಳ ವಿವಾದದ ದೃಷ್ಟಿಯಿಂದ, ಲಡಾಖ್ ಜೊತೆಗೆ ಉತ್ತರ ಸಿಕ್ಕಿಂ, ಉತ್ತರಾಖಂಡ ಮತ್ತು ಅರುಣಾಚಲ ಪ್ರದೇಶದ ಸೂಕ್ಷ್ಮ ಗಡಿ ಪ್ರದೇಶಗಳಲ್ಲಿ ಭಾರತೀಯ ಸೇನೆಯು ತನ್ನ ಸಂಖ್ಯೆಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಚೀನಾದ ಆಕ್ರಮಣಕಾಗಿ ನಡೆಗೆ ಭಾರತವು ಯಾವುದೇ ಸಂದರ್ಭದಲ್ಲೂ ಬಗ್ಗುವುದಿಲ್ಲ ಎಂದು ಸಂದೇಶವನ್ನು ರವಾನಿಸಿದೆ.

ಪ್ಯಾಂಗೊಂಗ್ ತ್ಸೋ ಸರೋವರದ ಪ್ರದೇಶ ಮಾತ್ರವಲ್ಲದೆ, ಗಾಲ್ವಾನ್ ಕಣಿವೆಯ ಡಾರ್ಬುಕ್-ಶಾಯೋಕ್-ದೌಲತ್ ಬೇಗ್ ಓಲ್ಡಿ ರಸ್ತೆಯನ್ನು ಸಂಪರ್ಕಿಸುವ ಪ್ರದೇಶದಲ್ಲಿ ಭಾರತವು ವಿಶೇಷ ಗಮನಹರಿಸಲಾಗಿದೆ.

ಕಾಶ್ಮೀರ ವಿಷಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ವಹಿಸುವುದಾಗಿ 2019ರ ಆಗಸ್ಟ್‌ನಲ್ಲಿ ಟ್ರಂಪ್ ಹೇಳಿದ್ದರು.

ಜುಲೈ 2019 ರಲ್ಲಿ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶ್ವೇತಭವನದ ಭೇಟಿ ನೀಡಿದ್ದ ಸಂದರ್ಭದಲ್ಲಿ , ಸುದ್ದಿಗಾರರ ಜೊತೆ ಮಾತನಾಡಿದ ಟ್ರಂಪ್, ಭಾರತದ ಪ್ರಧಾನಿ ಮೋದಿಯವರು ಕಾಶ್ಮೀರ ವಿಷಯದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ಕೇಳಿದ್ದಾರೆ ಎಂದು ಹೇಳಿಕೊಂಡಿದ್ದರು. ಮೂರನೆಯವರ ಹಸ್ತಕ್ಷೇಪವನ್ನು ಬಯಸಿಲ್ಲ ಎಂದು ಹೇಳಿದ್ದ ಭಾರತ ಸರ್ಕಾರ ಟ್ರಂಪ್ ಹೇಳಿಕೆಯನ್ನು ನಿರಾಕರಿಸಿತ್ತು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights