ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್!

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರಿಗೆ ಸಂಬಂಧಿಸಿದೆ ಎಂದು ನಕಲಿ ವಿಡಿಯೋವನ್ನು ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್‌ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದ ಸಂಬಂಧಿಸಿದಂತೆ ವಿವಿಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಸಿಂಗ್ ವಿರುದ್ಧ ಭೂಪಾಲ್ ಅಪರಾಧ ವಿಭಾಗದ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

Bajrang Dal to file defamation case against Digvijay Singh over ...

ಚೌಹಾಣ್‌ ಅವರ ಹೆಸರಿಗೆ ಮಸಿ ಬಳಿಯುವಂತ ವಿಡಿಯೋವನ್ನು ಸಿಂಗ್‌ ಅವರು ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದು, ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದ್ದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸು ಕುಗ್ಗಿಸಲು ದಿಗ್ವಿಜಯ್ ಸಿಂಗ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಟ್ವಿಟರ್ ನಲ್ಲಿ ನಕಲಿ ವಿಡಿಯೋ ಹಾಕುವ ಮೂಲಕ ಶಿವರಾಜ್ ಸಿಂಗ್ ಚೌಹ್ಹಾಣ್ ಅವರ ವರ್ಚಸ್ಸನ್ನು ಕುಗ್ಗಿಸಿ, ಜನಮಾನಸದಲ್ಲಿ ಅವರ ಬಗ್ಗೆ ತಪ್ಪು ತಿಳುವಳಿಕೆ ಮೂಢಿಸಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಬಿಜೆಪಿ ನಾಯಕರು ಉಲ್ಲೇಖಿಸಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights