ಮಲೆನಾಡು ಭಾಗದಲ್ಲಿ ನಿಲ್ಲದ ಕಾಡಾನೆಗಳ ಉಪಟಳ : ಕೆಲಸಕ್ಕೆ ತೆರಳಲು ಕಾರ್ಮಿಕರು ಹಿಂದೇಟು

ಹಾಸನ ಜಿಲ್ಲೆ ಮಲೆನಾಡು ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಸಕಲೇಶಪುರ ತಾಲ್ಲೂಕಿನ ಮಳಗಳಲೆ, ಹೊಂಕರವಳ್ಳಿ ಸಮೀಪ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಮೂಡಿಸಿವೆ.

ಮಳಗಳಲೆ ಗ್ರಾಮದ ಸಮೀಪವಿರುವ ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ ಗಜಪಡೆ, ಮರಿಗಳೊಂದಿಗೆ ತಾಯಿ ಆನೆಗಳು ಪೆರೇಡ್ ನಡೆಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಗಜಪಡೆ ಗಲಾಟೆಯಿಂದ ಹೈರಾಣಗಿರುವ ರೈತರು, ಕಾಫಿ‌ ತೋಟದ ಕೆಲಸಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕಾಡಾನೆಗಳ ಹಿಂಡು ಕಂಡು ಕಾರ್ಮಿಕರು ಓಡಿ ಹೋಗುವಂತಹ ಸ್ಥಿತಿ ನಿರ್ಮಾಣವಾಗಿದೆ.

ಗಜಪಡೆ ಹಿಂಡು ಕಂಡು ಗ್ರಾಮಸ್ಥರು ಭಯಭೀತರಾಗಿದ್ದು, ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಸ್ಥಳೀಯರ ಆಗ್ರಹಿಸಿದ್ದಾರೆ. ಕಾಡಾನೆಗಳನ್ನು ಹಿಮ್ಮೆಟ್ಟಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights