ಮಹಾರಾಷ್ಟ್ರ ಸರ್ಕಾರ ರಚನೆ‌ ವಿಚಾರ : ನಾಳೆ ವಿಶ್ವಾಸಮತ ಸಾಬೀತುಪಡಿಸಲು ಸುಪ್ರೀಂ ಆದೇಶ

ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲ ಕೊಶ್ಯಾರಿ ಅವರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ, ಕಾಂಗ್ರೆಸ್​, ಎನ್​ಸಿಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತೀರ್ಪು ಇಂದು ಪ್ರಕಟಿಸಿದೆ. ನಾಳೆ ವಿಶ್ವಾಸಮತ ಯಾಚಿಸುವಂತೆ ಕೋರ್ಟ್ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಸರ್ಕಾರಕ್ಕೆ​​ ಸೂಚಿಸಿದೆ. ಈ ಮೂಲಕ ಪ್ರತಿಪಕ್ಷಗಳಿಗೆ ಜಯ ದೊರೆತಂತಾಗಿದೆ.

ಹೌದು…  ಮಹಾರಾಷ್ಟ್ರದ ಸಿಎಂ ದೇವೇಂದ್ರ ಫಡ್ನವೀಸ್ ನಾಳೆ ಸಂಜೆ 5 ಗಂಟೆಯೊಳಗೆ ವಿಶ್ವಾಸಮತ ಸಾಬೀತು ಪಡಿಸಬೇಕೆಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ನ್ಯಾಯಾಧೀಶರು ಬಿಹಾರ ಮತ್ತು ಉತ್ತರಾಖಂಡ ತೀರ್ಪುಗಳನ್ನು ಉಲ್ಲೇಖಿಸಿದರು. ತಕ್ಷಣವೇ ಹಂಗಾಮಿ ಸ್ಪೀಕರ್ ನೇಮಕವಾಗಬೇಕು. ವಿಶ್ವಾಸಮತ ಸಾಬೀತು ಮಾಡುವ ದೃಶ್ಯಗಳನ್ನು ಚಿತ್ರೀಕರಿಸಬೇಕು. ಬಹುಮತದ ಸಂಪೂರ್ಣ ಪ್ರಕ್ರಿಯೆಯನ್ನು ಹಂಗಾಮಿ ಸ್ಪೀಕರ್ ನೋಡಿಕೊಳ್ಳಬೇಕು. ಬಹುಮತ ಸಾಬೀತು ಪ್ರಕ್ರಿಯೆ ನೇರಪ್ರಸಾರ ಆಗಬೇಕು ಮತ್ತು ಗೌಪ್ಯ ಮತದಾನಕ್ಕೆ ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights