ಮುಂದಿನ ಸೂಚನೆವರೆಗೂ ಎಲ್ಲಾ ಪ್ರಯಾಣಿಕ ರೈಲು ಸೇವೆ ಸ್ಥಗಿತ…

ಮುಂದಿನ ಸೂಚನೆ ಬರುವವರೆಗೂ ಎಲ್ಲಾ ಸಾಮಾನ್ಯ ಪ್ರಯಾಣಿಕ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.‌ ಆದರೆ 230 ವಿಶೇಷ ರೈಲು ಸೇವೆ ಮುಂದುವರಿಯಲಿದೆ‌ ಎಂದು ರೈಲ್ವೆ ಇಲಾಖೆ ಹೇಳಿಕೆ ನೀಡಿದೆ.

ಮೊದಲೇ ನಿರ್ಧರಿಸಿದಂತೆ ಮತ್ತು ತಿಳಿಸಿದಂತೆ, ನಿಯಮಿತ ಪ್ರಯಾಣಿಕ ಮತ್ತು ಉಪನಗರ ರೈಲು ಸೇವೆಗಳನ್ನು ಮುಂದಿನ ಸೂಚನೆ ಬರುವವರೆಗೂ ಸ್ಥಗಿತಗೊಳಿಸಲಾಗುವುದು ಎಂದು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲು ಬಯಸುತ್ತೇವೆ. ಪ್ರಸ್ತುತ ಚಾಲನೆಯಲ್ಲಿರುವ 230 ವಿಶೇಷ ರೈಲುಗಳು ಚಾಲನೆಯಲ್ಲಿ ಮುಂದುವರಿಯಲಿವೆ ಎಂದು ರೈಲ್ವೆಯ ಹೇಳಿಕೆ ತಿಳಿಸಿದೆ.

ಮುಂಬೈನ ಸ್ಥಳೀಯ ರೈಲುಗಳು, ಪ್ರಸ್ತುತ ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಸೀಮಿತ ಆಧಾರದ ಮೇಲೆ ಓಡುತ್ತಿವೆ, ಇದು ಸಹ ಚಾಲನೆಯಲ್ಲಿರಲಿದೆ ಎಂದು ಅದು ಹೇಳಿದೆ.

ಸ್ಥಳೀಯ ಅಧಿಕಾರಿಗಳಿಂದ ಗುರುತಿಸಲ್ಪಟ್ಟ ಅಗತ್ಯ ಸೇವೆಗಳ ಸಿಬ್ಬಂದಿಯನ್ನು ಕರೆದೊಯ್ಯಲು ಮುಂಬಯಿಯಲ್ಲಿ ಇತ್ತೀಚೆಗೆ ಪ್ರಾರಂಭವಾದ ಸೀಮಿತ ವಿಶೇಷ ಉಪನಗರ ಸೇವೆಗಳೂ ಸಹ ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ರಾಷ್ಟ್ರೀಯ ಸಾರಿಗೆ ಆಗಸ್ಟ್ 12 ರವರೆಗೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights