ಮುಂಬೈ–ಪುಣೆ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು..!

ಮುಂಬೈ – ಪುಣೆ ಎಕ್ಸ್​ಪ್ರೆಸ್​ ಹೆದ್ದಾರಿಯಲ್ಲಿ ಕಾರು ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.

ಇಂದು ಬೆಳಗಿನ ಜಾವ 1: 30ರ ಸುಮಾರಿನಲ್ಲಿ  ಭೀಕರ ರಸ್ತೆ ಅಪಘಾತದಲ್ಲಿ  ಕಾರಿನಲ್ಲಿದ್ದ 6 ಜನರಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪನ್ವೆಲ್​ನ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ

ಪ್ರಯಾಣಿಕರು ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಸತಾರಾದಿಂದ ಹಿಂದಿರುಗುತ್ತಿದ್ದರು. ಎಂದು ತಿಳಿದುಬಂದಿದೆ.  ಮೃತರಲ್ಲಿ 3 ಮಹಿಳೆಯರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights