ಮುಂಬೈ–ಪುಣೆ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು..!
ಮುಂಬೈ – ಪುಣೆ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕಾರು ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ 1: 30ರ ಸುಮಾರಿನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಜನರಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪನ್ವೆಲ್ನ ಎಂಜಿಎಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ
ಪ್ರಯಾಣಿಕರು ಸಂಬಂಧಿಕರ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಸತಾರಾದಿಂದ ಹಿಂದಿರುಗುತ್ತಿದ್ದರು. ಎಂದು ತಿಳಿದುಬಂದಿದೆ. ಮೃತರಲ್ಲಿ 3 ಮಹಿಳೆಯರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.