ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಜೆಡಿಎಸ್ ನ ತಸ್ಲಿಮ್ ಅವರು ಆಯ್ಕೆ
ಭಾರೀ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಅಂತ್ಯಗೊಂಡಿದ್ದು ಮೇಯರ್ ಆಗಿ ಜೆಡಿಎಸ್ ನ ತಸ್ಲಿಮ್ ಅವರು ಆಯ್ಕೆಯಾಗಿದ್ದಾರೆ.
ಇಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ನಡೆದಿದ್ದು, ಜೆಡಿಎಸ್ ಅಭ್ಯರ್ಥಿ ಮೈಸೂರು ಮಹಾನಗರ ಪಾಲಿಕೆ ನಂಬರ್ 29 ರ ಸದಸ್ಯೆ ತಸ್ಲಿಮ್ ಅವರು 47 ಮತಗಳನ್ನು ಪಡೆಯುವ ಮೂಲಕ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಗೆ ಮೇಯರ್ ಮತ್ತು ಉಪಮೇಯರ್ ಅಯ್ಕೆಗೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.

