ಮೋದಿಯದ್ದು ತುಘಲಕ್ ದರ್ಬಾರ್; ಯಡಿಯೂರಪ್ಪನವರದ್ದು ಪರ್ಸೆಂಟ್ ದರ್ಬಾರ್: ಸಿದ್ದರಾಮಯ್ಯ
ದೇಶದ ಜನರಿಗೆ ಪ್ಯಾಕೇಜ್ ನೀಡುವ ನೆಪದಲ್ಲಿ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಬುರುಡೆ ಬಿಡುತ್ತಿದ್ದಾರೆ. ಪ್ಯಾಕೇಜ್ಗಳು ಘೋಷಣೆಗಷ್ಟೇ ಸೀಮಿತವಾಗಿದೆಯೇ ಹೊರತು ಯಾರಿಗೂ ಉಪಯೋಗವಾಗಿಲ್ಲ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಏಕಮುಖವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ವಿರೋಧಪಕ್ಷಗಳ ಜೊತೆ ಚರ್ಚೆ ನಡೆಸುವುದಿಲ್ಲ. ಅವರು ಯಾರ ಸಲಹೆಯೂ ಕೇಳದ ಕಾರಣದಿಂದ ಕೊರೋನಾ ಸೋಂಕು ವ್ಯಾಪಕವಾಗಿ ಹರಡಿದೆ. ಇದರಿಂದ ದೇಶದ ಜನರು ನಷ್ಟ ಅನುಭವಿಸುವಂತಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ @narendramodi ಅವರು ಏಕಮುಖವಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಪ್ರತಿಪಕ್ಷಗಳ ಜೊತೆ ಚರ್ಚೆ ನಡೆಸುವುದಿಲ್ಲ. ಅವರು ಯಾರ ಸಲಹೆಯೂ ಕೇಳದ ಕಾರಣದಿಂದ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬಿ, ದೇಶದ ಜನ ನಷ್ಟ ಅನುಭವಿಸುವಂತಾಗಿದೆ. 2/5#Covid_19
— Siddaramaiah (@siddaramaiah) May 19, 2020
ಪ್ಯಾಕೇಜ್ ಹೆಸರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುರುಡೆ ಬಿಡುತ್ತಿದ್ದಾರೆ. ಕರ್ನಾಟಕದಲ್ಲಿ ತುಘಲಕ್ ದರ್ಬಾರ್ ನಡೆಯುತ್ತಿದೆ. ನಮ್ಮ ಸರ್ಕಾರವನ್ನು ಶೇ. 10ರ ಸರ್ಕಾರ ಎಂದಿದ್ದ ಪ್ರಧಾನಮಂತ್ರಿ ಮೋದಿ ಮತ್ತು ಯಡಿಯೂರಪ್ಪ ಅವರದ್ದು ಎಷ್ಟು ಪರ್ಸೆಂಟ್ ಸರ್ಕಾರ ಎಂದು ಹೇಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಪ್ಯಾಕೇಜ್ ಹೆಸರಲ್ಲಿ ಪ್ರಧಾನಿ @narendramodi ಹಾಗೂ ಸಿಎಂ @BSYBJP ಅವರು ಬುರುಡೆ ಬಿಡುತ್ತಿದ್ದಾರೆ. ರಾಜ್ಯದಲ್ಲಿ ತೊಘಲಕ್ ದರ್ಬಾರ್ ನಡೆಯುತ್ತಿದೆ. ನಮ್ಮ ಸರ್ಕಾರವನ್ನು 10% ಸರ್ಕಾರ ಎಂದಿದ್ದ ಪ್ರಧಾನಿ ಮೋದಿಯವರು, ಯಡಿಯೂರಪ್ಪ ಅವರದ್ದು ಎಷ್ಟು ಪರ್ಸೆಂಟ್? ಸರ್ಕಾರ ಎಂದು ಹೇಳಲಿ. 3/5#Covid_19
— Siddaramaiah (@siddaramaiah) May 19, 2020
ಎಪಿಎಂಸಿ ಕಾಯ್ದೆಗೆ ತಿದ್ದುಪಡಿ, ಪಂಚಾಯ್ತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಸೇರಿದಂತೆ ಸರ್ಕಾರದ ವಿವಿಧ ಕ್ರಮಗಳನ್ನು ಖಂಡಿಸಿ ಹೋರಾಟ ನಡೆಸುತ್ತೇವೆ. ನಾಳೆ ಸರ್ಕಾರದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ತಾಲೂಕು, ಜಿಲ್ಲಾ ಮಟ್ಟದಲ್ಲಿಯೂ ಹೋರಾಟ ನಡೆಸುತ್ತೇವೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಎಪಿಎಂಸಿ ಕಾಯಿದೆಗೆ ತಿದ್ದುಪಡಿ, ಪಂಚಾಯಿತಿಗಳಿಗೆ ನಾಮನಿರ್ದೇಶನ, ಕಾರ್ಮಿಕ ಕಾಯಿದೆಗೆ ತಿದ್ದುಪಡಿ
ಸೇರಿದಂತೆ ಸರ್ಕಾರದ ವಿವಿಧ ಕ್ರಮಗಳನ್ನು ಖಂಡಿಸಿ ಹೋರಾಟ ಮಾಡುತ್ತೇವೆ. ನಾಳೆ ಸರ್ಕಾರದ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಬಳಿಕ ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ಕೈಗೆತ್ತಿಕೊಳ್ಳಲಾಗುವುದು. 5/5#Covid_19— Siddaramaiah (@siddaramaiah) May 19, 2020
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಪ್ಯಾಕೇಜ್ಗಳು ಕೇವಲ ಘೋಷಣೆಗಷ್ಟೇ ಸೀಮಿತವಾಗಿದ್ದು, ಇದುವರೆಗೂ ಯಾರ ಕೈಗೂ ಹಣ ಸೇರಿಲ್ಲ. ಹೀಗಾದರೆ ಜನರ ಕಷ್ಟ ದೂರವಾಗುವುದು ಹೇಗೆ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

