ರಸ್ತೆ ಅಪಘಾತದಲ್ಲಿ 6 ಮಂದಿ ರೈತರು ಸಾವು : ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಯುಪಿ ಸರ್ಕಾರ

ಮಂಗಳವಾರ ರಾತ್ರಿ ರಸ್ತೆ ಅಪಘಾತದಲ್ಲಿ ಆರು ರೈತರು ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಇಟವಾ ಜಿಲ್ಲೆಯಲ್ಲಿ ನಡೆದಿದೆ.

ರೈತರು ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಅವರು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್‌ಗೆ ಇಟಾವಾದ ಫ್ರೆಂಡ್ಸ್ ಕಾಲೋನಿ ಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಮತ್ತೊಂದು ಟ್ರಕ್‌ ಡಿಕ್ಕಿ ಹೊಡೆದಿದೆ.

ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಒಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಸೈಫೈ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಸಿಟಿ ಆರ್ ಸಿಂಗ್ ಎಎನ್‌ಐಗೆ ತಿಳಿಸಿದ್ದಾರೆ.

ಮಾಹಿತಿ ಪಡೆದ ಮೇಲೆ ಅಪಘಾತ ಸ್ಥಳಕ್ಕೆ ತಲುಪಿದ ಎಸ್‌ಎಸ್‌ಪಿ ಎಟಾವಾ ಆಕಾಶ್ ತೋಮರ್, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. “ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಎಸ್‌ಎಸ್‌ಪಿ ತಿಳಿಸಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಪಘಾತಕ್ಕೀಡಾದವರ ರಕ್ತಸಂಬಂಧಿಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡ ವ್ಯಕ್ತಿಗೆ 50,000 ರೂ.ಗಳ ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ದೇಶಾದ್ಯಂತ ರಸ್ತೆ ಅಪಘಾತಗಳು ಹೆಚ್ಚಾಗಿವೆ, ಹೆಚ್ಚಾಗಿ ವಲಸೆ ಕಾರ್ಮಿಕರನ್ನು ಒಳಗೊಂಡಿವೆ. ಐದು ರಾಜ್ಯಗಳಲ್ಲಿ ಮಂಗಳವಾರ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಪ್ಪತ್ತೆರಡು ಜನರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಒಂಬತ್ತು ಜನರು, ಮಹಾರಾಷ್ಟ್ರದಲ್ಲಿ ನಾಲ್ಕು, ಉತ್ತರಪ್ರದೇಶದಲ್ಲಿ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಆರು, ಜಾರ್ಖಂಡ್‌ನಲ್ಲಿ ಒಂದು ಮತ್ತು ಒಡಿಶಾದಲ್ಲಿ ನಡೆದ ಎರಡು ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೇ 16 ರ ಮುಂಜಾನೆ ಇಪ್ಪತ್ನಾಲ್ಕು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 36 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights