ರಾಜ್ಯದಲ್ಲಿಂದು ಹೊಸದಾಗಿ 53 ಕೊರೊನಾ ಕೇಸ್: 847ಕ್ಕೇರಿದ ಸೋಂಕಿತರ ಸಂಖ್ಯೆ!

ಲಾಕ್ ಡೌನ್ ಸಡಿಲಿಕೆಗೊಂಡಾಗಿನಿಂದ ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನದಲ್ಲಿ ಹೊಸದಾಗಿ 53 ಕೊರೊನಾ ಕೇಸ್ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 847ಕ್ಕೇರಿಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಮಾಹಿತಿ ನೀಡಿದೆ.

ಹೌದು… ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ಕೊರೋನಾ ಸೋಂಕು ಪತ್ತೆಯಾದ ನಂತರ ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ.

ಬೆಂಗಳೂರು ನಗರ 3, ಬೆಳಗಾವಿ 22, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ, ದಾವಣಗೆರೆ ತಲಾ 1, ಕಲಬುರಗಿ 3, ಶಿವಮೊಗ್ಗ 8, ಬಾಗಲಕೋಟೆಯಲ್ಲಿ 8 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ಬೆಂಗಳೂರು 3, ಉತ್ತರ ಕನ್ನಡ 7, ಕಲಬುರಗಿ 3, ದಾವಣಗೆರೆ 1, ಬೆಳಗಾವಿ 21, ಬಾಗಲಕೋಟೆ 8, ಶಿವಮೊಗ್ಗ 8, ಚಿಕ್ಕಬಳ್ಳಾಪುರ 1 ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದೆ. ಬೆಂಗಳೂರಿನ 57 ವರ್ಷದ ಮಹಿಳೆ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಜೊತೆಗೆ, ಶನಿವಾರ ಸಂಜೆ ಬೆಂಗಳೂರು ನಗರ ನಿವಾಸಿಯಾಗಿದ್ದ 56 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೇರಿಕೆಯಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

https://twitter.com/ikseshwarappa/status/1259374522374828032

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights