ರಾಜ್ಯದಲ್ಲಿಂದು 15 ಕೊರೊನಾ ಹೊಸ ಪ್ರಕರಣಗಳು ಪತ್ತೆ : 489ಕ್ಕೇರಿದ ಸೋಂಕಿತರ ಸಂಖ್ಯೆ!

ರಾಜ್ಯದಲ್ಲಿ ಕೊರೊನಾ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡುಬರುತ್ತಿದೆ. ಇಂದು ರಾಜ್ಯದಲ್ಲಿ 15 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ 489ಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.

ಹೌದು… ನಿನ್ನೆ ರಾಜ್ಯದಲ್ಲಿ 29 ಪ್ರಕರಣಗಳು ವರದಿಯಾಗಿದ್ದವು. ಆದರೆ ಇಂದು ಇವತ್ತು ಮತ್ತೆ 15 ಪ್ರಕರಣಗಳು ದಾಖಲಾಗಿವೆ. ನಿನ್ನೆ ಬೆಂಗಳೂರಿನಲ್ಲಿ 19 ಪ್ರಕರಣಗಳು ಪತ್ತೆಯಾಗಿದ್ದವು ಇವತ್ತು 6 ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಈವರೆಗೆ ಸಿಲಿಕಾನ್ ಸಿಟಿಯಲ್ಲಿ 126 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ 489ಕ್ಕ ಸೋಂಕಿತರ ಸಂಖ್ಯೆ ಏರಿಕೆಯಾಗಿವೆ.

ಬೆಳಗಾವಿಯ ಹಿರೇಬಾಗೆವಾಡಿಯಲ್ಲಿ ಮತ್ತೆ 6 ಪ್ರಕರಣಗಳು ದಾಖಲಾಗಿವೆ. ಮಂಡ್ಯದಿಂದ 1 ಪ್ರಕರಣ, ಚಿಕ್ಕಬಳ್ಳಾಪುರದಲ್ಲಿ 1 ಪ್ರಕರಣ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಪ್ರಕರಣ ದಾಖಲಾಗಿದೆ. ಒಟ್ಟು 15 ಕೇಸ್ ಗಳು ಹೊಸದಾಗಿ ದೃಡಪಟ್ಟಿದ್ದು ಮಾರ್ನಿಂಗ್ ಬುಲಿಟಿನ್ ನಲ್ಲಿ  ತಿಳಿದು ಬಂದಿದೆ. ಸಂಜೆ ವೇಳೆಗೆ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಬರೋಬ್ಬರಿ 1,429 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಈವರೆಗೆ 775 ಮಂದಿಯನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು, ಈವರೆಗೆ 6,817 ಮಂದಿಗೆ ಸೋಂಕು ತಗುಲಿದ್ದು, 301 ಮಂದಿ ಸಾವನ್ನಪ್ಪಿದ್ದಾರೆ. ಹೆಚ್ಚು ಸೋಂಕು ಹರಡಿರುವ ರಾಜ್ಯಗಳ ಪಟ್ಟಿಯಲ್ಲಿ ಗುತರಾತ್ 2ನೇ ಸ್ಥಾನದಲ್ಲಿದ್ದು, ಅಲ್ಲಿ 2,815 ಮಂದಿ ಕೊರೊನಾಗೆ ತುತ್ತಾಗಿದ್ದು, 127 ಮಂದಿ ಸಾವನ್ನಪ್ಪಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights